ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಈ ಸುದ್ದಿ ಓದಿದರೆ ನಿಜಕ್ಕೂ ಇವರು ಮನುಷ್ಯರಾ ಅಥವಾ ರಾಕ್ಷಸರಾ ಎಂಬ ಅನುಮಾನ ಬಾರದೇ ಇರದು… ಹೌದು ಇವರು ನಡೆಸಿರುವ ಕೃತ್ಯ ಅಂತಹ ರಾಕ್ಷಸೀ ಮನೋಭಾವನೆಯದ್ದು.
ಆಟವಾಡುತ್ತಿದ್ದ ಮೂರು ವರ್ಷದ ಮಗುವನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ನವದೆಹಲಿಯ ಫತೇಪುರ್ ಬೆರಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಬಳಿ ಆಟವಾಡುತ್ತಿದ್ದ ಮೂರು ವರ್ಷದ ಮಗುವನ್ನು ಇಬ್ಬರು ದುರುಳರು ಅಪಹರಣ ಮಾಡಿ, ಆ ಕೂಸಿನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ಅಸ್ವಸ್ಥಗೊಂಡಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಗಳನ್ನು ಶಕ್ತಿಮಾನ್ ಸಿಂಗ್ ಹಾಗೂ ರಾಂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















