No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಸರ್ಕಾರಿ ನೌಕರರಿಗಾಗಿ ಫ್ಯಾಮಿಲಿ ಮಾರ್ಟ್ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2023
in ಶಿವಮೊಗ್ಗ
0
ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸಿಗೆ ಸಾಧ್ಯವಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.

ಅವರು ಇಂದು ನಗರದ ಎನ್‌ಇಎಸ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಜಿಲ್ಲಾ ಶಾಖೆ ಶಿವಮೊಗ್ಗ ವತಿಯಿಂದ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ತಾಲ್ಲೂಕು ಸಮ್ಮೇಳನ, ನೌಕರರಿಗೆ ಪ್ರಜಾಸ್ನೇಹಿ ಆಡಳಿತ ಕಾರ್ಯಗಾರ, ನೌಕರರ ಫ್ಯಾಮಿಲಿ ಮಾರ್ಟ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಶಿವಮೊಗ್ಗದ ಸರ್ಕಾರಿ ನೌಕರರು ಪುಣ್ಯವಂತರು ಇಲ್ಲಿ ಯಾವ ರಾಜಕಾರಣಿಯ ಹಸ್ತಕ್ಷೇಪವಿಲ್ಲ. ನೌಕರರ ಎಲ್ಲಾ ಬೇಡಿಕೆಗಳನ್ನು ಅವರು ಕೇಳುವ ಮುನ್ನವೇ ರಾಜ್ಯಾಧ್ಯಕ್ಷ ಷಡಕ್ಷರಿಯವರು ಈಡೇರಿಸಿರುತ್ತಾರೆ. ಕರ್ನಾಟಕ ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು, ಅಭಿವೃದ್ಧಿಯಲ್ಲೂ ಕೂಡ ಮುಂಚೂಣಿಯಲ್ಲಿದೆ. ಪ್ರಧಾನಿಯವರು ಕೂಡ ರಾಜ್ಯದ ಅಭಿವೃದ್ಧಿಯನ್ನು ಹೊಗಳಿದ್ದಾರೆ. ಅದಕ್ಕೆ ಕಾರಣ ಸರ್ಕಾರಿ ನೌಕರರು ಎಂದರು.

ಸಂಸದ ಬಿ.ವೈ.ರಾಘವೇಂದ್ರ MP B Y Raghavendra ಮಾತನಾಡಿ, ಬಿಜೆಪಿ ಸರ್ಕಾರ ಸರ್ಕಾರಿ ನೌಕರರಿಗೆ ಏನೆಲ್ಲಾ ಸೌಲಭ್ಯ ನೀಡಿದೆ ಎಂಬುದನ್ನು ರಾಜ್ಯಾಧ್ಯಕ್ಷರು ಒಂದು ಗಂಟೆಯ ಭಾಷಣವನ್ನು 15 ನಿಮಿಷದಲ್ಲೇ ಹೇಳಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಈ ವರ್ಷದಲ್ಲಿ ಇನ್ನು 25 ವರ್ಷಗಳ ಮುಂದಿನ ದೃಷ್ಟಿಯನ್ನಿಟ್ಟುಕೊಂಡು ದೇಶ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದು, ನಿವೆಲ್ಲಾ ಸರ್ಕಾರಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು.
ಪ್ರಧಾನಿ ಮೋದಿಯವರು ಹೆತ್ತ ತಾಯಿ ನಿಧನರಾದ ಸಂದರ್ಭದಲ್ಲೂ ಕೂಡ ತನ್ನ ಕಾರ್ಯವನ್ನು ಮುಗಿಸಿ ಕೆಲವೇ ಗಂಟೆಗಳಲ್ಲಿ ದೇಶದ ಸೇವೆಗೆ ವಾಪಾಸ್ಸಾಗುವುದರ ಮೂಲಕ ಒಬ್ಬ ಆದರ್ಶ ರೋಲ್‌ಮಾಡೆಲ್ ಆಗಿದ್ದಾರೆ. ನಮಗೆ ಕರ್ತವ್ಯದ ಹಾದಿಯನ್ನು ತೋರಿಸಿಕೊಟ್ಟಿದ್ದಾರೆ. ಅವರ ಆಸೆಗಳನ್ನು ಪೂರೈಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

Also read: ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಅಪಾರ ಮೆಚ್ಚುಗೆ

ಶಿವಮೊಗ್ಗ ಜಿಲ್ಲೆ ಟೂರಿಸಂ ಸ್ಪಾಟ್ ಆಗಲಿದ್ದು, ಈಗಾಗಲೇ ಕೇಂದ್ರ ಪ್ರವಾಸೋದ್ಯಮ ಮಂತ್ರಿಗಳಿಗೆ ಭೇಟಿಯಾಗಿ ದೇಶದ ಎಲ್ಲಾ ಪ್ರವಾಸಿ ಗೈಡ್‌ಗಳನ್ನು ಶಿವಮೊಗ್ಗಕ್ಕೆ ಕರೆಸಿ ಇಲ್ಲಿಯ 30ಕ್ಕೂ ಹೆಚ್ಚು ಪ್ರಸಿದ್ಧ ಪ್ರವಾಸಿ ತಾಣಗಳ ಬಗ್ಗೆ ಕಾರ್ಯಾಗಾರ ಏರ್ಪಡಿಸಿ ದೇಶದ ಗಮನ ಸೆಳೆಯುವ ಕಾರ್ಯ ಮಾಡಲು ವಿನಂತಿಸಿಕೊಂಡಿದ್ದೇನೆ. ಅವರು ಅದಕ್ಕೆ ಒಪ್ಪಿದ್ದಾರೆ. ಈಗಾಗಲೇ 250ಕೋಟಿ ರೂ. ವೆಚ್ಚದಲ್ಲಿ ಜೋಗ್‌ಫಾಲ್ಸ್ ಉನ್ನತೀಕರಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ ರಾಣೆಬೆನ್ನೂರು ರೈಲ್ವೆ ಮಾರ್ಗ ಬಜೆಟ್‌ನಲ್ಲಿ 250ಕೋಟಿ ರೂ. ನಿಗದಿಪಡಿಸಲಾಗಿದೆ. ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳಲಿದೆ. ಈ ರೀತಿ ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಶಿವಮೊಗ್ಗ ಜಿಲ್ಲೆ ದೇಶದ ಗಮನ ಸೆಳೆದಿದೆ. ಇದಕ್ಕೆ ಸರ್ಕಾರಿ ನೌಕರರ ಸಹಕಾರವು ಇದೆ ಎಂದರು.
ಮಾಜಿ ಜಿ.ಪಂ.ಸದಸ್ಯ ಕೆ.ಈ. ಕಾಂತೇಶ್ ಮಾತನಾಡಿ, ಜೇನುಗೂಡಿನಲ್ಲಿ ರಾಣಿ ಜೇನು ಇದ್ದಂತೆ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಎಲ್ಲರನ್ನೂ ಒಗ್ಗೂಡಿಸಿ ತಾಲ್ಲೂಕು ಮಟ್ಟದ ಸಮ್ಮೇಳನವನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಯೋಜಿಸಿರುವುದು ಅವರ ಮತ್ತು ನೌಕರರ ನಡುವಿನ ಸಂಬಂಧವನ್ನು ಸೂಚಿಸುತ್ತದೆ. ಕರೋನಾ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಸರ್ಕಾರಿ ನೌಕರರು ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯ ಎಲ್ಲಾ ಜನಪ್ರತಿನಿಧಿಗಳು ನಿಮ್ಮೊಂದಿಗಿದ್ದಾರೆ ಎಂದರು.

ಶಾಸಕ ಭೋಜೆಗೌಡ ಮಾತನಾಡಿ, ಏನಾದರೂ ಆಗು ಮೊದಲು ಮಾನವನಾಗು ಎನ್ನುವಂತೆ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಮಾನವೀಯ ದೃಷ್ಟಿಯಿಂದ ಕೆಲಸಮಾಡಬೇಕಿದೆ. ನಮ್ಮ ನಡವಳಿಕೆಯಿಂದ ನಮಗೆ ಒಳ್ಳೆಯ ಹೆಸರು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ತಮ್ಮ ಕೆಲಸವನ್ನು ಮಾಡಬೇಕು ಎಂದರು.

ಶಾಸಕ ಆಯನೂರು ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರ ಈ ಸಮಾರಂಭದಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದ್ದು, ಶಿಕ್ಷಕರ ಟೀಮ್ ಅನ್ನು ಷಡಕ್ಷರಿ ಯಾಕೆ ಕೈಬಿಟ್ಟಿದ್ದಾರೆ. ಬಹುಶಃ ಶಿಕ್ಷಕರಿಗೆ ತಾಳ್ಮೆ ಜಾಸ್ತಿ ಅದಕ್ಕೆ ಸುಮ್ಮನಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಸರ್ಕಾರಿ ನೌಕರರು ನಗು ನಗುತ್ತಾ ಕಾರ್ಯನಿರ್ವಹಿಸಿ ತಮ್ಮ ಗುರಿಯನ್ನು ಮುಟ್ಟಬೇಕು ಎಂದರು.

ಈ ಸಂದರ್ಭದಲ್ಲಿ ಖ್ಯಾತ ಚಿಂತಕರಾದ ಡಾ.ಗುರುರಾಜ್ ಕರ್ಜಗಿ ಅವರಿಂದ ಪ್ರಜಾಸ್ನೇಹಿ ಆಡಳಿತ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಯಿತು. ಖ್ಯಾತ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್ ಅವರಿಂದ ಕೆಲಸದ ಒತ್ತಡಕ್ಕೆ ನಗೆ ಮದ್ದು ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ವಹಿಸಿದ್ದರು.

ಶಾಸಕ ಅಶೋಕ್‌ನಾಯ್ಕ್, ಶಿವಮೊಗ್ಗ ಜಿಲ್ಲಾ,ತಾಲ್ಲೂಕು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ಧಬಸಪ್ಪ ಬಿ. ಕೇಂದ್ರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaMP B Y RaghavendraNewsinKannadaNewsKannadaShimogaShivamoggaShivamogga Newsಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಅಪಾರ ಮೆಚ್ಚುಗೆ

Next Post

ಅನಿಯಮಿತ ರಾಸಾಯನಿಕ ಆಹಾರ ಸೇವನೆ ಆರೋಗ್ಯಕ್ಕೆ ಮಾರಕ: ಎಸ್‌ಪಿ ಮಿಥುನ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನಿಯಮಿತ ರಾಸಾಯನಿಕ ಆಹಾರ ಸೇವನೆ ಆರೋಗ್ಯಕ್ಕೆ ಮಾರಕ: ಎಸ್‌ಪಿ ಮಿಥುನ್ ಕುಮಾರ್

ಅನಿಯಮಿತ ರಾಸಾಯನಿಕ ಆಹಾರ ಸೇವನೆ ಆರೋಗ್ಯಕ್ಕೆ ಮಾರಕ: ಎಸ್‌ಪಿ ಮಿಥುನ್ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL