ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.
ಅವರು ಇಂದು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಹಿನ್ನೆಲೆಯಲ್ಲಿ ಬಂದಾಗ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಐಎಸ್‌ಎಲ್ ಕಾರ್ಖಾನೆಗೆ VISL ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದೆ. ಮತ್ತು ಇಂದು ಕೂಡ ಕಾರ್ಖಾನೆಯ ಕಾರ್ಮಿಕರು ಮತ್ತು ಅಧಿಕಾರಿಗಳ ನಿಯೋಗವು ತಮ್ಮನ್ನು ಭೇಟಿ ಮಾಡಲಿದೆ. ಅವರೊಂದಿಗೆ ಚರ್ಚಿಸುತ್ತೇನೆ. ಹಾಗೆಯೇ ಕಬ್ಬಿಣ ಮತ್ತು ಉಕ್ಕು ಉತ್ಪಾದಕ ಉದ್ಯಮಿಗಳ ಜೊತೆಯೂ ಸಭೆ ನಡೆಸುತ್ತೇನೆ. ಶಿವಮೊಗ್ಗದ ಜನಪ್ರತಿನಿಧಿಗಳ ಜೊತೆಯೂ ಮಾತನಾಡುತ್ತೇನೆ. ಉನ್ನತ ಮಟ್ಟದ ಸಭೆ ಕರೆದು ಅಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಮನವಿಯನ್ನು ಕೇಂದ್ರದ ಸಚಿವರು ಒಪ್ಪುತ್ತಾರೆ. ಈ ವಾರದಲ್ಲಿಯೇ ಈ ಬಗ್ಗೆ ಸಂಪೂರ್ಣ ಕಾರ್ಯೋನ್ಮುಖನಾಗುತ್ತೇನೆ. ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.
Also read: ಸಾಗರ ಮಾರಿಕಾಂಬಾ ಜಾತ್ರೆ: ಅದ್ಧೂರಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post