ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ ಅವರ ಪುತ್ರಿ ಐಶ್ವರ್ಯಾಗೂ D K Shivakumar Doughter Aishwarya ಸಹ ಸಿಬಿಐ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.
10 ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಶಿವಕುಮಾರ್ ಅವರ ಅಕ್ರಮ ಆಸ್ತಿ ಸಂಪಾದನೆ ಕುರಿತಾಗಿ ತನಿಖೆ ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಡಿಕೆಶಿ ಒಡೆತನದ ಕಾಲೇಜಿನ ದಾಖಲೆಗಳನ್ನು ಈ ಹಿಂದೆ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿಯಾಗಿರುವ ಐಶ್ವರ್ಯಾಗೆ ನೋಟೀಸ್ ಜಾರಿ ಮಾಡಿದ್ದಾರೆ.
Also read: ಶಾಕಿಂಗ್! ಪ್ರೇಯಸಿಯನ್ನು ಕೊಂದು ಫ್ರಿಡ್ಜ್’ನಲ್ಲಿಟ್ಟಿದ್ದ ಅಫ್ತಾಬ್ ಆಕೆಯ ಮೂಳೆ ಏನು ಮಾಡಿದ್ದ ಗೊತ್ತಾ?
ಐಶ್ವರ್ಯ ಮಾತ್ರವಲ್ಲದೇ ಕಾಲೇಜಿನ ಎಲ್ಲಾ ನಿರ್ದೇಶಕರಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇನ್ನು, ಪ್ರಕರಣದ ಕುರಿತಾಗಿ ಸಿಬಿಐ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post