ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ತಾವು ಉಡುಗೊರೆಯಾಗಿ ಪಡೆದ ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಆಕಾಶ ನೀಲಿ ಬಣ್ಣದ ಜಾಕೆಟ್ ಧರಿಸಿ ಇಂದು ಪ್ರಧಾನಿ ನರೇಂದ್ರ ಮೋದಿ PM Modi ಕಲಾಪಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.
ಪ್ರಧಾನಿ ಮೋದಿಯವರು ಬೆಂಗಳೂರಿನ ಮಾದವಾರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತ ಇಂಧನ ಸಪ್ತಾಹ-2023ಕ್ಕೆ ಫೆ.6ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಯಾರಿಸಿರುವ ಸೌರಶಕ್ತಿ ಆಧಾರಿತ ಕುಕ್ಟಾಪ್ ಹಾಗೂ ಬಳಸಿದ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿರುವ ವಸ್ತçಗಳನ್ನು ಬಿಡುಗಡೆ ಮಾಡಿದ್ದರು. ಈ ಸಮಾರಂಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಈ ಜಾಕೆಟ್ ಅನ್ನು ಪ್ರಧಾನಿ ಅವರಿಗೆ ಉಡುಗೊರೆಯಾಗಿ ನೀಡಿತ್ತು.












Discussion about this post