ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ವ್ಯಾಪ್ತಿಯಲ್ಲಿ ಎರಡು ಕಡೆ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ವಿನೋಬನನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಮಾಲೋಚನ ಅಧಿಕಾರಿಯ ಮನೆಯಲ್ಲಿಯೇ ಕಳ್ಳತನ ನಡೆದಿದೆ.
ಇಲ್ಲಿನ ನಿವಾಸಿಯಾಗಿರುವ ನಾಗರತ್ನ ಎಂಬವರು ತವರಿಗೆ ಹೋಗಿದ್ದರು. ತೀರ್ಥಹಳ್ಳಿ ತಾಲೂಕಿನ ಕೋಣಂದೂರಲ್ಲಿರುವ ಮನೆಗೆ ಹೋಗಿ ವಾಪಸ್ ಬಂದ ವೇಳೆಯಲ್ಲಿ ಕಳ್ಳತನ ನಡೆದಿರುವುದು ಗೊತ್ತಾಗಿದೆ.
ಮನೆಯ ಬೀಗ ಒಡೆದು ಕಳ್ಳತನ ಮಾಡಿರುವ ಕಳ್ಳರು 5,45,200 ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣ ಕಳ್ಳತನ ಮಾಡಿದ್ದಾರೆ.
ಬೊಮ್ಮನಕಟ್ಟೆಯ ಇ ಬ್ಲಾಕ್’ನಲ್ಲಿರುವ ಫಜಲ್ ಉನ್ನೀಸಾ ಎಂಬ ಟೈಲರ್ ಮನೆಯಲ್ಲಿ ಕಳ್ಳತನ ನಡೆದಿದೆ.
Also read: ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾದ ತೀರ್ಥಹಳ್ಳಿ ರೈತ
ಆರ್’ಎಂಎಲ್ ನಗರದಲ್ಲಿರುವ ಅಣ್ಣನ ಮನೆಗೆ ಹೋದಾಗ ಮನೆಯ ಬಾಗಿಲು ಒಡೆದು ನಾಲ್ಕು ಸಾವಿರ ರೂ ನಗದು ಕಳ್ಳತನ ನಡೆದಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post