No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿ, ಭದ್ರಾವತಿ ಎರಡು ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆಗೆ ಉತ್ತಮ ಬೆಂಬಲ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2023
in ಶಿವಮೊಗ್ಗ
0
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್‌ವೈ ಹೆಸರಿಡುವ ಬಗ್ಗೆ ತಮ್ಮದು ಯಾವುದೇ ತಕರಾರಿಲ್ಲ. ಅನೇಕ ವರ್ಷದಿಂದ ಶಿವಮೊಗ್ಗದ ಅಭಿವೃದ್ಧಿಗೆ ಯಡಿಯೂರಪ್ಪ ಶ್ರಮಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ತಿಳಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಪೇಕ್ಷಿತ ಅಭ್ಯರ್ಥಿ ರವಿಕುಮಾರ್ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ತೀರ್ಥಹಳ್ಳಿ ಮತ್ತು ಭದ್ರಾವತಿ ಎರಡು ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿದ್ದೇವೆ. ಬೇರೆ ಕ್ಷೇತ್ರದಲ್ಲಿ ಶೀಘ್ರದಲ್ಲೇ ಯಾತ್ರೆ ಮಾಡುತ್ತೇವೆ. ಎರಡು ಕ್ಷೇತ್ರದಲ್ಲಿ ಜನ ಉತ್ತಮ ಬೆಂಬಲ ನೀಡಿದ್ದಾರೆ ಎಂದರು.
ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತು ಹಾಕಬೇಕು ಎಂದು ಜನ ಬೆಂಬಲ ನೀಡ್ತಿದ್ದಾರೆ. ಅವರ ಅಪೇಕ್ಷೆಯಂತೆ ನಾವು ಕೂಡ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಹಲವು ಜನಪರ ಯೋಜನೆ ಜಾರಿಗೆ ತಂದಿತ್ತು..ಅದ್ರೆ, ಬಿಜೆಪಿ ಸರ್ಕಾರ ಅವುಗಳನ್ನು ನಿಲ್ಲಿಸಿದೆ ಎಂದು ಆರೋಪಿಸಿದರು.

Also read: ಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗೆ ಕೃತಿಗಳ ಆಹ್ವಾನ

ಮಲೆನಾಡಿನಲ್ಲಿ ಹಲವು ಸಮಸ್ಯೆಗಳಿದ್ದು, ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಬಗರ್ ಹುಕುಂ, ಅರಣ್ಯಭೂಮಿ ಸಾಗುವಳಿ ರೈತರ ಹಿತಕಾಯಲು ನಾವು ಬದ್ದರಾಗಿದ್ದೇವೆ. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರುತ್ತಿದ್ದೇವೆ ಎಂದು ಡಿಕೆಶಿ ತಿಳಿಸಿದರು.
ವಿಐಎಸ್‌ಎಲ್ ಕಾರ್ಖಾನೆಯ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಮೈನಿಂಗ್ ನೀಡಿದ್ರೆ ಕಾರ್ಖಾನೆ ಉಳಿಯುತ್ತೆ ಎನ್ನುವುದಾದರೆ ಇಷ್ಟುವರ್ಷ ಬಿಜೆಪಿ ಏನು ಮಾಡ್ತಾ ಇದ್ರು ಡಬ್ಬಲ್ ಇಂಜಿನ್ ಸರ್ಕಾರ ಮಲಗಿತ್ತಾ ಎಂದು ಪ್ರಶ್ನಿಸಿದರು.

ಇಡಿ ಕಿರುಕುಳದ ಬಗ್ಗೆ ಮಾತನಾಡಿ, ಯಂಗ್ ಇಂಡಿಯಾ ಮಗಳ ವಿದ್ಯಾಭ್ಯಾಸದ ಕುರಿತು ಪ್ರಶ್ನೆ ಕೇಳ್ತಾರೆ ಎಂದರೆ ಇದು ಯಾವತರಹದ ವಿಚಾರಣೆ ಎಂಬುದು ತಿಳಿಯುತ್ತೆ. ಈ ಬಗ್ಗೆ ಸಿಬಿಐಗೆ ಪತ್ರಬರೆಯುವೆ ಎಂದರು.

ಶಿವಮೊಗ್ಗದ ಶಾಸಕ ಈಶ್ವರಪ್ಪ ಮತ್ತು ಜಾರಕಿ ಹೊಳಿ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ. ಶಾಸಕ ಸ್ಥಾನ ಕಳೆದುಕೊಂಡ ಇಬ್ಬರು ಶಾಸಕರು ಸಚಿವ ಸ್ಥಾನ ಕಳೆದುಕೊಂಡು ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ. ಸಂಘಟನೆಯಲ್ಲೂ ಅವರು ಇಲ್ಲ ಎಂದು ಕಿಚಾಯಿಸಿದರು.
ರಮೇಶ್ ಜಾರಕಿಹೊಳಿ ಸಿಬಿಐ ತನಿಖೆಗೆ ನೀಡಲಿ ನನ್ನ ಅಭ್ಯಂತರವಿಲ್ಲ. ಅವರು ಕೋರ್ಟ್‌ಗೆ ಏನು ಅಫಿಡವಿಟ್ ನೀಡಿದ್ದಾರೆ ಹೇಳಲಿ. ನನ್ನ ಹೆಸರು ಮಾತನಾಡಿದರೆ ಮಾತ್ರ ಅವರಿಗೆ ಪ್ರಚಾರ ಸಿಗುತ್ತದೆ. ಕಾಂಗ್ರೆಸ್‌ನಲ್ಲಿ ರಾಜ್ಯದಲ್ಲಿ ನಾಯಕರಿಲ್ಲ ಎಂದು ರಾಹುಲ್‌ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯನ್ನು ಕರೆಸುತ್ತಿದ್ದಾರೆ ಎಂಬ ಬಿಜೆಪಿ ಟೀಕೆಗೆ ಕಾಂಗ್ರೆಸ್‌ನಲ್ಲಿ ಸಾಮೂಹಿಕ ನಾಯಕತ್ವ ಎಂದು ತಿರುಗೇಟು ನೀಡಿದರು.

ಯಡಿಯೂರಪ್ಪ ಕಣ್ಣೀರು ಹಾಕಲು ಏನು ಕಾರಣ. ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿದರು. ಅದಕ್ಕೆ ಮೊದಲು ಬಿಜೆಪಿಯವರು ಸಮರ್ಪಕ ಉತ್ತರ ನೀಡಲಿ. ಅವರ ಮೇಲೆ ಭ್ರಷ್ಟಾಚಾರದ ಆರೋಪ ಇತ್ತ ಎನ್ನುವುದನ್ನು ಜನರಿಗೆ ತಿಳಿಸಲಿ. ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ಮಹಿಳೆಯರಿಗೆ 2 ಸಾವಿರ ರೂ. ಮತ್ತು ಉಚಿತ ವಿದ್ಯುತ್ ಬಗ್ಗೆ ಮತದಾರರಿಗೆ ಗ್ಯಾರಂಟಿ ನೀಡಲಿದ್ದಾರೆ ಎಂದರು.

ಶಿವಮೊಗ್ಗ ನಗರದಲ್ಲಿ ಅವರ ಪಕ್ಷದ ಆಯನೂರು ಮಂಜುನಾಥ್ ಅವರೇ ಫ್ಲೆಕ್ಸ್ ಮೂಲಕ ಸತ್ಯವನ್ನು ಹೇಳಿದ್ದಾರೆ. ಸಣ್ಣ ಪುಟ್ಟ ವ್ಯಾಪಾರಸ್ಥರು ಶಿವಮೊಗ್ಗ ನಗರದಲ್ಲಿ ಶಾಂತಿ ಪದೇ ಪದೇ ಕದಡುತ್ತಿದ್ದರೆ. ವ್ಯಾಪಾರ ವ್ಯವಹಾರ ಮಾಡುವ ಸ್ಥಿತಿಯಲ್ಲಿಲ್ಲ. ಬಡ್ಡಿ ಕಟ್ಟಲು ಆಗುತ್ತಿಲ್ಲ. ಎಲ್ಲರೂ ಬಿಜೆಪಿ ಆಡಳಿತದ ಮೇಲೆ ನಿರಾಶರಾಗಿದ್ದಾರೆ. ಬಿಜೆಪಿಯ ನಾಯಕರು ತಲಾ 500 ಕೋಟಿ ಹಾಕಿ ಎರಡು ದೊಡ್ಡ ಕಾರ್ಖಾನೆಯನ್ನು ಸ್ಥಾಪಿಸಿ ಉದ್ಯೋಗವನ್ನಾದರೂ ನೀಡಬಹುದಿತ್ತು. ಅದು ಬಿಟ್ಟು ಇರುವ ಕಾರ್ಖಾನೆಯನ್ನು ಮುಚ್ಚಲು ಹೊರಟಿದ್ದಾರೆ. ದೇವರು ಅವರಿಗೆ ಒಳ್ಳೆಯದನ್ನು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಎಲ್ಲಾ ನಾಯಕರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D K ShivakumarKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Previous Post

ಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗೆ ಕೃತಿಗಳ ಆಹ್ವಾನ

Next Post

ಸ್ಕೌಟ್ ಮತ್ತು ಗೈಡ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ತೃತೀಯ ಬಹುಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಕೌಟ್ ಮತ್ತು ಗೈಡ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ತೃತೀಯ ಬಹುಮಾನ

ಸ್ಕೌಟ್ ಮತ್ತು ಗೈಡ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ತೃತೀಯ ಬಹುಮಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

April 20, 2026
ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL