ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಕಂಚಿಬಾಗಿಲು ವೃತ್ತದಲ್ಲಿ ಓರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಅನ್ವರ್ ಕಾಲೋನಿ ಖಲಂದರ್ ನಗರದ ನಿವಾಸಿ ರಹಮಾನ್ ಎಂಬಾತ ಗೋ ಮಾಂಸ ತೆಗೆದುಕೊಂಡು ಹೋಗುತ್ತಿದ್ದಾನೆಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ನಡುವೆ ರಹಮಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾಗಿರುವ ರಹಮಾನ್ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈತನ ಹೇಳಿಕೆ ಆಧರಿಸಿ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಬೇಕಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post