No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಕೇವಲ ಕಟ್ಟಡಗಳಿಂದ ಆರೋಗ್ಯ ಸುಧಾರಣೆ ಸಾಧ್ಯವಿಲ್ಲ: ಆರೋಗ್ಯ ಸಚಿವ ಸುಧಾಕರ್‌

ಕನಕಪುರದಲ್ಲಿ ನಿರ್ಮಾಣವಾದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2023
in ರಾಮನಗರ
0
ಕೇವಲ ಕಟ್ಟಡಗಳಿಂದ ಆರೋಗ್ಯ ಸುಧಾರಣೆ ಸಾಧ್ಯವಿಲ್ಲ: ಆರೋಗ್ಯ ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕನಕಪುರ  |

ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಿ ಎಂದು ನಾನು ಎಂದೂ ಕೇಳಿರಲಿಲ್ಲ. ಅಂತಹ ಮನಸ್ಥಿತಿಯೂ ನನ್ನದಲ್ಲ. ಕನಕಪುರಕ್ಕೆ ಮುಂದಿನ ದಿನಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು ಯೋಜನೆ ಮಂಜೂರಾತಿ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Health Minister Dr. Sudhakar ಸ್ಪಷ್ಪಪಡಿಸಿದರು.

ಇನ್ಫೋಸಿಸ್ ಫೌಂಡೇಶನ್‌ ಸಹಯೋಗದಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಕನಕಪುರದಲ್ಲಿ ನಿರ್ಮಾಣವಾದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಕನಕಪುರಕ್ಕೆ ಅಧಿಕೃತವಾಗಿ ಮೊದಲ ಬಾರಿಗೆ ಬಂದಿದ್ದೇನೆ. ಮೆಡಿಕಲ್‌ ಕಾಲೇಜು ಯೋಜನೆಯನ್ನು ಕನಕಪುರದಿಂದ ಕಿತ್ತುಕೊಂಡು ಹೋಗಿದ್ದೇನೆ ಎಂದು ಇಲ್ಲಿನ ಸಂಸದರು ಪದೇ ಪದೆ ಹೇಳುತ್ತಾರೆ. ಆದ್ದರಿಂದ ಇಲ್ಲಿಗೆ ನಮ್ಮ ಕ್ಲಿನಿಕ್‌ ನೀಡಲಾಗುವುದು. ಹಾಗೆಯೇ ಮಹಿಳೆಯರಿಗಾಗಿ ಮೀಸಲಾದ ಆಯುಷ್ಮತಿ ಕ್ಲಿನಿಕ್‌ ಕೂಡ ನೀಡಲಾಗುವುದು. ರಾಮನಗರ ಜಿಲ್ಲೆಗೆ ಈಗಾಗಲೇ ಅಂದಾಜು 600 ಕೋಟಿ ರೂ. ವೆಚ್ಚದ ಮೆಡಿಕಲ್‌ ಕಾಲೇಜು ನೀಡಲು ಸಚಿವ ಸಂಪುಟದಲ್ಲಿ ನಿರ್ಧಾರವಾಗಿದೆ. ಕನಕಪುರದಲ್ಲಿ ಹೌಸಿಂಗ್‌ ಬೋರ್ಡ್‌ನಲ್ಲಿ ಜಾಗ ಗುರುತಿಸಲಾಗಿದೆ. ಅನೇಕ ಜಿಲ್ಲೆಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜು ಆರಂಭಿಸಲಾಗಿದೆ. ಕೆಲವೆಡೆ ಇನ್ನೂ ಆಗಿಲ್ಲ. ಆದ್ದರಿಂದ ಕನಕಪುರದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು ಆರಂಭಿಸಲು ಚಿಂತಿಸಲಾಗಿದೆ. ಇದು ಮಾಡಿದರೆ ಬಹಳ ಸುಲಭವಾಗುತ್ತದೆ ಎಂದರು.

ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಲು ನಾನು ಎಂದೂ ಕೇಳಿರಲಿಲ್ಲ. ಅಂತಹ ಮನಸ್ಥಿತಿ ನನಗಿಲ್ಲ. ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಇದನ್ನು ಘೋಷಿಸಲಾಗಿತ್ತು. ನಂತರ ಬಿ.ಎಸ್‌.ಯಡಿಯೂರಪ್ಪನವರು ಅನುದಾನ ನೀಡಿದರು. ಮುಂದಿನ ದಿನಗಳಲ್ಲಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜು ನೀಡಲು ಎಲ್ಲಾ ಬಗೆಯ ಪ್ರಯತ್ನ ಮಾಡಲಾಗುವುದು ಎಂದರು.
ಕೇವಲ ಕಟ್ಟಡಗಳಿಂದ ಆರೋಗ್ಯ ಸುಧಾರಣೆ ಸಾಧ್ಯವಿಲ್ಲ. ಅದಕ್ಕೆ ಬೇಕಾದ ವೈದ್ಯರು, ತಜ್ಞರನ್ನು ಕೂಡ ನೇಮಕಾತಿ ಮಾಡಬೇಕಾಗುತ್ತದೆ. ಕನಕಪುರದ ಈ ಹೊಸ ಆಸ್ಪತ್ರೆಗೆ ಬೇಕಾದ ವೈದ್ಯೋಪಕರಣಗಳಲ್ಲಿ ಅರ್ಧದಷ್ಟನ್ನು ಕಳುಹಿಸಲಾಗಿದೆ. ಹಾಗೆಯೇ ಒಂದೇ ತಿಂಗಳಲ್ಲಿ ವೈದ್ಯರು ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ನೇಮಕಾತಿ ಮಾಡಲಾಗುವುದು ಎಂದರು.

Also read: ವಿಐಎಸ್‌ಎಲ್ ಉಳಿಸಲು ಪ್ರಧಾನಿಯವರ ಮನವೊಲಿಸುವಂತೆ ಆದಿಚುಂಚನಗಿರಿ ಶ್ರೀಗಳಿಗೆ ಕಾರ್ಮಿಕರ ಮನವಿ

ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯದ ಅಭಿವೃದ್ಧಿಯನ್ನು ಸರ್ಕಾರವೇ ಮಾಡಬೇಕೆಂದು ಬಯಸುವುದು ತಪ್ಪು. ವಿವಿಧ ಸಂಘ, ಸಂಸ್ಥೆಗಳ ಸಹಕಾರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಅಗತ್ಯ. ದೇಶದಲ್ಲಿ 2014 ರಿಂದ 2021 ರವರೆಗೆ, 1 ಲಕ್ಷ ಕೋಟಿ ರೂ.ಗೂ ಅಧಿಕ ಸಿಎಸ್‌ಆರ್‌ ನಿಧಿಯನ್ನು ವಿವಿಧ ಕಾರ್ಯಗಳಿಗೆ ಬಳಸಲಾಗಿದೆ. ಅದರಲ್ಲೂ ಕರ್ನಾಟಕ, ಆಂಧ್ರಪ್ರದೇಶ ಮೊದಲಾದ ದಕ್ಷಿಣದ ರಾಜ್ಯಗಳಲ್ಲಿ ಶೇ.33 ರಷ್ಟನ್ನು ಬಳಸಲಾಗಿದೆ. ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚು ಒತ್ತು ದೊರೆತಿದೆ ಎಂದರು.
ಮಹಿಳೆಯರ ಅಭಿವೃದ್ಧಿಯನ್ನು ಅಳತೆ ಮಾಡದೆ ದೇಶದ ಅಭಿವೃದ್ಧಿ ಅಳತೆ ಮಾಡಲು ಸಾಧ್ಯವೇ ಇಲ್ಲ ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಶೇ.81 ರಿಂದ 61 ಕ್ಕೆ ಇಳಿಕೆಯಾಗಿದೆ. ನವಜಾತ ಶಿಶುವಿನ ಮರಣ ಪ್ರಮಾಣ ಇನ್ನೂ ತಗ್ಗಿಸಬೇಕಿದೆ. ದೇಶದ ಸರಾಸರಿಗಿಂತ ಕರ್ನಾಟಕದ ಪ್ರಮಾಣ ಉತ್ತಮ ಎಂದೆನಿಸಿದರೂ, ದಕ್ಷಿಣದ ಕೆಲ ರಾಜ್ಯಗಳಿಗಿಂತ ಹಿಂದುಳಿದಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಸಮಸ್ಯೆ ಹೆಚ್ಚಿದೆ ಎಂದರು.

ಇದಕ್ಕಾಗಿ ಜಿಲ್ಲೆ, ತಾಲೂಕು ಮಟ್ಟದಲ್ಲೂ ಸಮಸ್ಯೆಗಳನ್ನು ಗುರುತಿಸಿ ಕ್ರಮ ವಹಿಸಲಾಗಿದೆ. ಹಿಂದಿನ ಸಿಎಂ ಬಿ.ಎಸ್‌.ಯಡಿಯೂರಪ್ಪನವರು, 125 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದು, ಅದರಂತೆ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ನಗರದ ಬಡವರಿಗೆ ನಮ್ಮ ಕ್ಲಿನಿಕ್‌ ನೀಡಿರುವುದು ಹೊಸ ಪರಿಕಲ್ಪನೆಯಾಗಿದೆ. ನಗರದ ಬಡವರಿಗೆ ಪ್ರಾಥಮಿಕ ಆರೋಗ್ಯ ಸೇವೆ ನೀಡುವ ಕೇಂದ್ರಗಳು ಈವರೆಗೆ ಇರಲಿಲ್ಲ. 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲುದ್ದೇಶಿಸಿದ್ದು, 118 ಕ್ಲಿನಿಕ್‌ಗಳು ಕಾರ್ಯಾರಂಭವಾಗಿದೆ ಎಂದರು.
ಮುಂದಿನ ತಿಂಗಳು ಶಿಲಾನ್ಯಾಸ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, 600 ಕ್ಕೂ ಹೆಚ್ಚು ಹಾಸಿಗೆಗಳ ಆಸ್ಪತ್ರೆಯನ್ನು ರಾಮನಗರದಲ್ಲಿ ನಿರ್ಮಿಸಲಾಗಿದೆ. ಜೊತೆಗೆ ಹೊಸ ಮೆಡಿಕಲ್‌ ಕಾಲೇಜು ನೀಡಲು ನಿರ್ಧಾರವಾಗಿದೆ. ಸಿಂಡಿಕೇಟ್‌ನಲ್ಲೂ ಅದು ಒಪ್ಪಿಗೆ ಪಡೆದು, ಮುಂದಿನ ತಿಂಗಳಲ್ಲಿ ಶಿಲಾನ್ಯಾಸ ನೆರವೇರುವ ಸಾಧ್ಯತೆ ಇದೆ ಎಂದರು.

ಬಿಜೆಪಿ ಪ್ರಣಾಳಿಕೆಗೆ ಸಂಬಂಧಿಸಿದಂತೆ ತಂಡದವರೊಂದಿಗೆ ಚರ್ಚೆ ನಡೆಸಲಾಗಿದೆ. ನಾಳೆ ಮತ್ತೊಂದು ಸಭೆ ನಡೆಯಲಿದೆ. ಇದರಲ್ಲಿ ಯಾರನ್ನು ಭೇಟಿ ಮಾಡಿ ಚರ್ಚಿಸಬೇಕೆಂದು ತೀರ್ಮಾನವಾಗಲಿದೆ. ಅತ್ಯಂತ ನೈಜ ಹಾಗೂ ನೂರಕ್ಕೆ ನೂರು ಅನುಷ್ಠಾನವಾಗುವಂತಹ ಅಂಶಗಳು ಪ್ರಣಾಳಿಕೆಯಲ್ಲಿ ಇರಲಿದೆ ಎಂದರು.

ಅಧಿಕಾರದ ಬಗ್ಗೆ ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಹೇಳಿರುವುದು ಅವರ ಅಭಿಪ್ರಾಯವಾಗಿದೆ. ಅದು ರಾಜ್ಯದ ಜನರ ಅಭಿಪ್ರಾಯವಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಅಭಿಪ್ರಾಯ ಹೇಳುತ್ತಾರೆ. ಸಿದ್ದರಾಮಯ್ಯನವರ ಸರ್ಕಾರದ ತಂಡವನ್ನು 2018 ರಲ್ಲೇ ಜನರು ಮನೆಗೆ ಕಳುಹಿಸಿದ್ದಾರೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Health Minister Dr. SudhakarKanakapuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕನಕಪುರ
Share206Tweet123Send
Previous Post

ವಿಐಎಸ್‌ಎಲ್ ಉಳಿಸಲು ಪ್ರಧಾನಿಯವರ ಮನವೊಲಿಸುವಂತೆ ಆದಿಚುಂಚನಗಿರಿ ಶ್ರೀಗಳಿಗೆ ಕಾರ್ಮಿಕರ ಮನವಿ

Next Post

ಎಲ್’ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್’ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

ಎಲ್'ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL