ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜ್ಞಾನ ವಾಹಿನಿ ಸಂಘದ 25ನೆಯ ವಾರ್ಷಿಕೋತ್ಸವ ಹಾಗೂ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನದ ಮಹಾಮಂಗಳೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿಮಿತ್ತ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ನಗರಕ್ಕೆ ಆಗಮಿಸಲಿದ್ದಾರೆ.
ಜ್ಞಾನ ವಾಹಿನಿ ಸಂಘದ 25ನೆಯ ವಾರ್ಷಿಕೋತ್ಸವ, ಮಾದನೂರು ಶ್ರೀ ವಿಷ್ಣುತೀರ್ಥ ಶ್ರೀಪಾದಂಗಳವರು ಆರಾಧನೆ ಹಾಗೂ ನಾಲ್ಕು ತಿಂಗಳಿನಿಂದ ನಡೆಯುತ್ತಿದ್ದ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನದ ಮಹಾ ಮಂಗಳೋತ್ಸವ ಫೆ.20ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಪಾಲ್ಗೊಳ್ಳಲಿದ್ದಾರೆ.
ಅಂದು ಮುಂಜಾನೆ 8.30ಕ್ಕೆ ಶ್ರೀಗಳವರಿಗೆ ಪೂರ್ಣಕುಂಭ ಸ್ವಾಗತ, ಪಾದಪೂಜೆ, 10.30ಕ್ಕೆ ಸಂಸ್ಥಾನ ಪೂಜೆ, ಮಧ್ಯಾಹ್ನ 12.30ಕ್ಕೆ ತೀರ್ಥಪ್ರಸಾದ, ಸಾಯಂಕಾಲ 6 ಗಂಟೆಗೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಿದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದವರೆಗೂ ಶ್ರೀಪಾದಂಗಳವರ ಸನ್ನಿಧಾನದಲ್ಲಿ ಶ್ರೀರಾಮದೇವರ ಉತ್ಸವ ನಡೆಯಲಿದೆ. ಸಂಜೆ 6.30ಕ್ಕೆ ಶ್ರೀಗಳಿಂದ ಶ್ರೀಮದ್ ವಾಲ್ಮೀಕಿ ರಾಮಾಯಣದ ಮಂಗಳ ಮಹೋತ್ಸವ ಹಾಗೂ ಅನುಗ್ರಹ ಸಂದೇಶ ನಡೆಯಲಿದ್ದು, ರಾತ್ರಿ 8 ಗಂಟೆಗೆ ತೊಟ್ಟಿಲು ಪೂಜೆ ಹಾಗೂ ಸ್ವಾಮಿಗಳಿಂದ ಫಲ ಮಂತ್ರಾಕ್ಷತೆ ವಿತರಣೆ ನಡೆಯಲಿದೆ.
Also read: ಕಂಪ್ಲಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಬಿ. ಶ್ರೀರಾಮುಲು ಭರವಸೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post