ಕಲ್ಪ ಮೀಡಿಯಾ ಹೌಸ್ | ಬೀದರ್ |
ಕಾಲುಬಾಯಿ ರೋಗ ಮತ್ತು ಇತರೆ ಕಾಯಿಲೆಗಳಿಂದ ಮೃತಪಟ್ಟ ಜಾನುವಾರುಗಳಿಗೆ ಪ್ರಸ್ತುತ ನೀಡುತ್ತಿರುವ ಪರಿಹಾರಧನದ ಮೊತ್ತ ಬಹಳಷ್ಟು ಕಡಿಮೆಯಿದ್ದು, ಅದನ್ನು 50 ಸಾವಿರ ರೂಪಾಯಿಗಳಿಗೆ ಹೆಚ್ಚಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khasehempur ಸದನದಲ್ಲಿ ಆಗ್ರಹಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಬಜೆಟ್ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಕಾಲುಬಾಯಿ ರೋಗ ಮತ್ತು ಇತರೆ ಕಾಯಿಲೆಗಳಿಂದ ಮೃತಪಟ್ಟ ಜಾನುವಾರುಗಳಿಗೆ ಸಂಬಂಧಿಸಿದ ಚುಕ್ಕೆಗುರುತಿನ ಪ್ರಶ್ನೆ ಕೇಳಿ ಮಾತನಾಡಿದ ಅವರು, ಮೃತ ಜಾನುವಾರುಗಳಿಗೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಉತ್ತರವನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕೆಂದು ಒತ್ತಾಯಿಸಿದರು.

ಮಧ್ಯಪ್ರವೇಶಿದ ಸಚಿವ ಮಾಧುಸ್ವಾಮಿರವರು, ಸರ್ಕಾರವನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಸರ್ಕಾರ ನೀಡುತ್ತಿರುವ ಪರಿಹಾರದ ಮೊತ್ತವನ್ನು ಕನಿಷ್ಟ 50 ಸಾವಿರ ರೂ. ಗಳಿಗೆ ಹೆಚ್ಚಿಸಬೇಕು. ಈಗ ನೀಡುತ್ತಿರುವ ಪರಿಹಾರ ನ್ಯಾಯಯುತವಾದದ್ದಲ್ಲ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು. ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡರು ಸೇರಿದಂತೆ ಅನೇಕರು ಬಂಡೆಪ್ಪ ಖಾಶೆಂಪುರ್ ರವರ ಮಾತಿಗೆ ಧ್ವನಿ ಗುಡಿಸಿದರು.












Discussion about this post