No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ

ಕಾಳಿದಾಸ ಕೃತಿಸಮೀಕ್ಷಾ 'ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಚಾಲನೆ | ಓಆರ್‌ಐ ಮತ್ತು ಶ್ರೀ ವ್ಯಾಸತೀರ್ಥ ಸಂಶೋಧನಾ ಪ್ರತಿಷ್ಠಾನದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2023
in ಮೈಸೂರು
0
ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸನಾತನ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕೃತ ಭಾಷೆಯ ರಕ್ಷಣೆ ಎಲ್ಲರ ಹೊಣೆಯಾಗಬೇಕು ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ ಶ್ರೀ ವ್ಯಾಸರಾಜರ ಮಠದ ಪೀಠಾಧೀಶ ಡಾ. ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಶ್ರೀ ವ್ಯಾಸತೀರ್ಥ ಸಂಶೋಧನಾ ಪ್ರತಿಷ್ಠಾನ ಸಂಯುಕ್ತವಾಗಿ ನಗರದ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ `ಕಾಳಿದಾಸ ಕೃತಿ ಸಮೀಕ್ಷಾ’ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಮಂಗಳವಾರ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಸರ್ಕಾರ ಮತ್ತು ಜಾಗತಿಕ ಮಟ್ಟದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಇಂದು ಅತಿ ಹೆಚ್ಚಿನ ಪ್ರೋತ್ಸಾಹ, ಅನುದಾನ ಮತ್ತು ಮಾನ್ಯತೆ ದೊರಕುತ್ತಿದೆ. ಇದು ಶ್ಲಾಘನೀಯವೇ. ಆದರೆ ಇದರೊಂದಿಗೆ ನಮ್ಮ ನೆಲದ ಮಹತ್ವಕ್ಕೆ ವಿಶ್ವಮಟ್ಟದಲ್ಲಿ ಮನ್ನಣೆ ತಂದುಕೊಡಲು ಕಾರಣವಾದ ಸಂಸ್ಕೃತ ಸಾಹಿತ್ಯದ ರಕ್ಷಣೆಗೂ ಆದ್ಯತೆ ಲಭ್ಯವಾಗಬೇಕು. ಒಂದು ಅಣು ಅಂಶದಷ್ಟು ಅನುದಾನಗಳನ್ನು ನೀಡುವ ನಿಟ್ಟಿನಲ್ಲಿ ಸರ್ಕಾರ ಮತ್ತು ವಿವಿಗಳು ಮುಂದಾಗಬೇಕು ಎಂದು ಅವರು ಆಶಿಸಿದರು.

ಪ್ರಾಚೀನ ವಿದ್ಯೆಗಳ ರಕ್ಷಣೆ, ತಾಳೆಗರಿ ಗ್ರಂಥಗಳ ಸಂರಕ್ಷಣೆಗಾಗಿ 123ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಪ್ರಾಚ್ಯವಿದ್ಯಾ ಸಂಶೋಧನಾಲಯದ ಸೇವೆಯನ್ನು ಶ್ಲಾಘಿಸಿದ ಸ್ವಾಮೀಜಿ, ಪ್ರಸ್ತುತ ಭಾರತೀಯ ಮಹಾಕಾವ್ಯಗಳ ಓದುವಿಕೆ ಮತ್ತು ರಸಾಸ್ವಾದನೆ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ನೀಡಿದ ಕೊಡುಗೆಗಳನ್ನು ಸ್ವೀಕರಿಸಲೇಬೇಕು. ಅದರೊಂದಿಗೆ ಪ್ರಾಚೀನ ಜ್ಞಾನ ಸಂಪತ್ತುಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವುದು ನಮ್ಮ ಗುರುತರ ಜವಾಬ್ದಾರಿಯಾಗಬೇಕು ಎಂದರು.
ಗೋಷ್ಠಿಗಳನ್ನು ಆಯೋಜಿಸಿ
ಕಾಳಿದಾಸ ವಿಶ್ವಮಾನ್ಯ ಕವಿ. ಆತನಿಗೆ ಸರಿಸಾಟಿ ಯಾರೂ ಇಲ್ಲ. ಜಡವನ್ನು ಚೇತನ ಮಾಡುವ, ಚೇತನವನ್ನು ಮಹಾ ಚೈತನ್ಯಗೊಳಿಸುವ ಕಾವ್ಯಶಕ್ತಿ ಆತನಿಗೆ ಇದೆ. ಕಾಳಿದಾಸನ ಕಾವ್ಯಗಳ ಬಗ್ಗೆ ಆಧುನಿಕ ದೃಷ್ಟಿಕೋನದಿಂದಲೂ ನೋಡುವ, ಹೊಸ ಹೊಸ ಅಂಶಗಳತ್ತ ಬೆಳಕುಚೆಲ್ಲುವ ಕೆಲಸ ಯುವ ವಿದ್ವಾಂಸರಿಂದ ಆಗಬೇಕು. ಕಾವ್ಯರಸ ಆಸ್ವಾದಿಸುವವರ ಸಂಖ್ಯೆ ಹೆಚ್ಚಾಗಬೇಕು. ನಮ್ಮ ಪರಂಪರೆಗೆ ಮೈಸೂರಿನ ಕೊಡುಗೆ ಅನನ್ಯವಾಗಿದೆ. ಇಂತಹಾ ಸಾಂಸ್ಕೃತಿಕ ರಾಜಧಾನಿಯಲ್ಲಿ ಕಾವ್ಯಾಸಕ್ತರು ಕೇವಲ ವಿಚಾರಸಂಕಿರಣಗಳಿಗಾಗಿ ನಿರೀಕ್ಷೆ ಮಾಡದೇ ಪ್ರತಿ ತಿಂಗಳೂ ಒಂದೆಡೆ ಸೇರಿ ಒಂದು ಆಪ್ತ ಸಂವಾದ, ಗೋಷ್ಠಿಗಳನ್ನು ಆಯೋಜನೆ ಮಾಡಬೇಕು. ಇದಕ್ಕೆ ಬೇಕಾದ ಕನಿಷ್ಠ ಆರ್ಥಿಕ ಸಂಪನ್ಮೂಲವನ್ನು ಶ್ರೀವ್ಯಾಸತೀರ್ಥ ವಿದ್ಯಾಪೀಠ ನೀಡಲಿದೆ ಎಂದವರು ಭರವಸೆ ನೀಡಿದರು.

ಗಟ್ಟಿತನದ ಕಾವ್ಯ ಬರುತ್ತಿಲ್ಲ
ಮಹಾಕವಿ ಕಾಳಿದಾಸನ ಶಾಕುಂತಲ, ರಘುವಂಶ ಮೊದಲಾದ ಕಾವ್ಯಗಳನ್ನು ಉಲ್ಲೇಖಿಸಿದ ಸ್ವಾಮೀಜಿ, ನಮ್ಮ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತಗಳೇ ಕಾವ್ಯಸೃಷ್ಟಿಗೆ ಆಧಾರವಾಗಿತ್ತು. ಪಂಡಿತರು, ಜ್ಞಾನಿಗಳು, ರಸಿಕರು ಇದರಿಂದ ಉತ್ತೇಜನಗೊಂಡು ಮತ್ತಷ್ಟು ಕಾವ್ಯರಚನೆಗೆ ಮುಂದಾಗುತ್ತಿದ್ದರು. ಪಂಪ, ರನ್ನ, ಕುಮಾರವ್ಯಾಸರು ಈ ನಿಟ್ಟಿನಲ್ಲಿ ಅಗ್ರಪಂಕ್ತಿಗೆ ಸೇರಿದವರಾಗುತ್ತಾರೆ. ಆದರೆ ಇಂದು ಈ ಸಂಸ್ಕೃತಿಯೇ ಮಾಯವಾಗುತ್ತಿದೆ. ಬಹುಕಾಲ ಉಳಿಯುವ ಕಾವ್ಯರಚನೆಯೇ ನಿಂತುಹೋಗಿದೆ ಎಂದು ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು.

ಜಾಗತೀಕರಣದ ಭರಾಟೆಯಲ್ಲಿ ಭಾರತೀಯರು ಬರುಬರುತ್ತಾ ವಿಚಿತ್ರ ಮನೋಸ್ಥಿತಿಗೆ ತಲುಪುತ್ತಿದ್ದಾರೆ. ನಮ್ಮ ಸಂಸ್ಕೃತಿಯಿAದ ವಿಮುಖರಾಗುವ ಕಾಲಘಟ್ಟ ಬರುತ್ತಿದೆ. ನಾವು ಈಗಲಾದರೂ ಜಾಗೃತರಾಗಿ ನಮ್ಮತನ ಉಳಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ವಿದ್ವಾನ್ ಡಾ. ಟಿ.ವಿ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ವ್ಯಾಸತೀರ್ಥ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಸಿ.ಎಚ್. ಶ್ರೀನಿವಾಸಮೂರ್ತಿ, ಓಆರ್‌ಐ ನಿರ್ದೇಶಕ ಡಾ. ಡಿ.ಪಿ. ಮಧುಸೂದನಾಚಾರ್ಯ ಹಾಜರಿದ್ದರು. ಇದೇ ಸಂದರ್ಭ ಪದ್ಮಶ್ರೀ ಪುರಸ್ಕೃತ ಹಿರಿಯ ಸಂಶೋಧಕ ಎಸ್. ಸುಬ್ಬರಾಮನ್ ಅವರಿಗೆ ಎರಡೂ ಸಂಸ್ಥೆಗಳ ಪರವಾಗಿ ಗೌರವ ಸನ್ಮಾನಿಸಲಾಯಿತು.

ನಂತರ ವಿಚಾರಸಂಕಿರಣದಲ್ಲಿ ನಾಡಿನ ಹಿರಿಯ ಸಂಸ್ಕೃತ ಮತ್ತು ವೇದಾಂತ ವಿದ್ವಾಂಸರುಗಳಾದ ಡಾ. ಜಿ. ಕೃಷ್ಣಪ್ರಸಾದ್, ಡಾ. ಶರತ್‌ಚಂದ್ರ ಸ್ವಾಮಿ, ಡಾ. ಟಿ.ವಿ. ಸತ್ಯನಾರಾಯಣ, ಪ್ರೊ. ತಿರುಮಲಾಚಾರ್ಯ ಕುಲಕರ್ಣಿ, ಡಾ. ಉಮಾಕಾಂತ ಭಟ್, ಡಾ. ಎಚ್.ವಿ. ನಾಗರಾಜರಾವ್ ಪ್ರೌಢ ಉಪನ್ಯಾಸ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KalidasaKannada News WebsiteLatest News KannadamysoreMysore UniversitySosaleSosale Vyasaraja Mathಕಾಳಿದಾಸಮೈಸೂರುಮೈಸೂರು ವಿಶ್ವವಿದ್ಯಾಲಯರಾಷ್ಟ್ರೀಯ ವಿಚಾರಸಂಕಿರಣಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿಶ್ರೀ ವ್ಯಾಸರಾಜರ ಮಠಸೋಸಲೆ
Share196Tweet123Send
Previous Post

ವಿಐಎಸ್’ಎಲ್ ಉಳಿಸಿ: ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಫ್ರೀಡಂ ಪಾರ್ಕ್’ನಲ್ಲಿ ಧರಣಿ

Next Post

ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್’ಐಎ ದಾಳಿ: ಐಎಸ್’ಐಎಸ್ ಬೆಂಬಲಿಗರಿಗಾಗಿ ಶೋಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹರ್ಷ ಕೊಲೆ ಪ್ರಕರಣದ ಎನ್‌ಐಎ ತನಿಖೆ ಆರಂಭ: ಆರೋಪಿಗಳ ಹಸ್ತಾಂತರ ಸಾಧ್ಯತೆ

ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್'ಐಎ ದಾಳಿ: ಐಎಸ್'ಐಎಸ್ ಬೆಂಬಲಿಗರಿಗಾಗಿ ಶೋಧ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL