ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿರುವ ಪ್ರತಿಷ್ಠಿತ ಭವ್ಯ ಯೋಗ ಕೇಂದ್ರವಾದ “ಶ್ರೀ ಶಿವಗಂಗಾ ಯೋಗ ಕೇಂದ್ರ(ರಿ.)”ದ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ “ಶ್ರೀ ಧ್ಯಾನಯೋಗಿ ಶಿವನ”ಮೂರ್ತಿ ಅನಾವರಣ ಹಾಗೂ “ಮಾನಸಮೌನ” ಪಿರಮಿಡ್ ಧ್ಯಾನ ಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ MP Raghavendra ನೆರವೇರಿಸಿದರು.
ಈ ಸಂದರ್ಭದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಗೋಣಿಬೀಡು ಶೀಲಸಂಪಾದನಾ ಮಠದ ಶ್ರೀ ಡಾ. ಸಿದ್ಧಲಿಂಗ ಮಹಾಸ್ವಾಮಿಗಳು ಹಾಗೂ ಶಿವಗಂಗೆಯ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಮಲೆಯಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಶಿವನ ಮೂರ್ತಿಯನ್ನು ಲೋಕಾರ್ಪಣೆಗೊಳಿಸಿ, ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಯೋಗ ಕೇಂದ್ರದ ಅಧ್ಯಕ್ಷರಾದ ನಂಜುಂಡಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಎಸ್.ಎಸ್.ಜ್ಯೋತಿಪ್ರಕಾಶ್, ಯೋಗ ಕೇಂದ್ರದ ಕಾರ್ಯಾಧ್ಯಕ್ಷರಾದ ರುದ್ರಾರಾಧ್ಯ, ಖನಿಜ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ, ಯೋಗ ಕೇಂದ್ರದ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕಲಗೋಡು ರತ್ನಾಕರ್ ಸೇರಿದಂತೆ ಅನೇಕ ಗಣ್ಯರು ಹಾಗೂ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕೇಂದ್ರದ ಯೋಗಾರ್ಥಿಗಳು ಉಪಸ್ಥಿತರಿದ್ದರು.
Also read: ಸಚಿವ ಅಶ್ವತ್ಥನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ಖಂಡನೆ: ಪ್ರತಿಕೃತಿ ದಹಿಸಿ ಪ್ರತಿಭಟನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















