ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ಸರ್ಕಾರದ ಕೊನೆಯ ಬಜೆಟನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿದ್ದು, ರಾಜ್ಯ ಅನ್ನದಾತರಿಗೆ ಬಂಪರ್ ಘೋಷಣೆ ಮಾಡಲಾಗಿದೆ.
ರಾಜ್ಯದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಈ ಮೂಲಕ ರೈತರನ್ನು ಸೆಳೆಯಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ.
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ. ಸಾಲ ನೀಡಲು ಮುಂದಾಗಿರುವ ಸರ್ಕಾರ ಈ ಮೂಲಕ 3 ಲಕ್ಷದವರೆಗಿನ ಶೂನ್ಯ ಬಡ್ಡಿದರದ ಸಾಲದ ಮೊತ್ತ 5 ಲಕ್ಷಕ್ಕೆ ಏರಿಕೆ ಮಾಡಿದೆ.
ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ.
ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಒದಗಿಸಲಾಗಿದ್ದುದ, 400 ಕೋಟಿ ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ., ಮಾರುಕಟ್ಟೆ ನೆರವು ನೀಡಲಾಗಿದ್ದು, ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post