ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ Kashi Yathre ಮೂರನೇ ಟ್ರಿಪ್ ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದ್ದು 300ಕ್ಕೂ ಟಿಕೆಟ್‌ಗಳು ಭರ್ತಿಯಾಗಿವೆ ಎಂದು ಐಆರ್‌ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 11, 2022 ರಂದು ಪ್ರಧಾನಿ ನರೇಂದ್ರ ಮೋದಿಜಿ ಅವರ ಅಮೃತ ಹಸ್ತದಿಂದ ಉದ್ಘಾಟನೆಯಾದ ಈ ಯೋಜನೆಯ ಎರಡೂ ಟ್ರಿಪ್‌ಗಳಿಗೆ ಬಹಳಷ್ಟು ಪ್ರಶಂಸೆ ವ್ಯಕ್ತವಾಗಿದೆ. ಚಳಿಗಾಲದ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ರೈಲು ಪ್ರವಾಸವನ್ನ ಫೆಬ್ರವರಿ 21, 2023 ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿದೆ. ವಾರಣಾಸಿ, ಅಯೋಧ್ಯೆ ಹಾಗೂ ಪ್ರಯಾಗ್‌ರಾಜ್ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಇದು ಉತ್ತಮ ಸಮಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ ಪ್ರತಿ ಯಾತ್ರಾರ್ಥಿಗೆ 5 ಸಾವಿರ ರೂಪಾಯಿಗಳ ಸಹಾಯಧನ ನೀಡಲಾಗುತ್ತಿದ್ದು, ರಾಜ್ಯದ ಭಕ್ತಾದಿಗಳೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ದಿವ್ಯ ಕಾಶಿ – ಭವ್ಯ ಕಾಶಿಯ ವೈಭವವನ್ನು ಕಣ್ತುಂಬಿಕೊಳ್ಳಬೇಕೆಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ Minister Shashikala Jolle ತಿಳಿಸಿದ್ದಾರೆ.
Also read: ಭಗವದ್ಗೀತೆ ಕಂಠಪಾಠ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಈ ಕೆಳಗಿನ ಲಿಂಕ್ ಬಳಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8595931290/92/93/94
https://www.irctctourism.com/bgaurav?searchKey=&tagType=&travelType=Domestic§or=All&bdar=6


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















