ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾ ಚೆಕ್ ಡ್ಯಾಂನಲ್ಲಿ ಈಜಲು ತೆರಳಿದ್ದ ಶಿವಮೊಗ್ಗ ಸಿಮ್ಸ್ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮೂಲತಃ ಕೊಡಗು ಜಿಲ್ಲೆಯ ಜಗತ್ (21) ಮೃತಪಟ್ಟ ದುರ್ದೈವಿ. ಶಿವಮೊಗ್ಗದ ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಈತ ತನ್ನ ಐವರು ಸ್ನೇಹಿತರೊಂದಿಗೆ ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ತೆರಳಿದ್ದರು. ಈ ವೇಳೆ ಜಗತ್ ಜೊತೆಗೆ ಇನ್ನೋರ್ವ ಈಜುವ ಸಲುವಾಗಿ ನೀರಿಗೆ ಇಳಿದಿದ್ದಾರೆ. ಆದರೆ ಆಳ ಇದ್ದದ್ದನ್ನು ಗಮನಿಸದ ಜಗತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಚೆಕ್ ಡ್ಯಾಂನ ಗೇಟ್ ಬಳಿ ಜಗತ್ ಮೃತದೇಹ ಪತ್ತೆಯಾಗಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















