ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಇಲ್ಲಿನ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಕೆಎಸ್’ಆರ್’ಟಿಸಿಯ ಬಸ್ಸನ್ನೇ ಕಳ್ಳರು ಕದ್ದೊಯ್ತಿರುವ ಘಟನೆ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್ ಡಿಪೋಗೆ ಸೇರಿದ ಬಸ್ಸನ್ನು ನಿನ್ನೆ ರಾತ್ರಿ ಕಳ್ಳತನ ಮಾಡಲಾಗಿದ್ದು, ಬಸ್ಸನ್ನು ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ.
ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಪತ್ತೆಗೆ ಎರಡು ವಿಶೇಷ ತಂಡಗಳು ತೆಲಂಗಾಣಕ್ಕೆ ತೆರಳಿವೆ ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















