ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎಂಜಿನಿಯರಿಂಗ್, ಎಂ.ಟೆಕ್, ಎಂಬಿಎ, ಎಂಸಿಎ ರ್ಯಾಂಕ್ ಪ್ರಕಟಗೊಂಡಿದ್ದು, ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಐದು ರ್ಯಾಂಕ್ಗಳನ್ನು ಪಡೆದಿದ್ದಾರೆ.
ಬಿ.ಇ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ವಿದ್ಯಾಶ್ರೀ.ಆರ್ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಎಂ.ಟೆಕ್ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ಇಂಪನಾ.ಆರ್ ಐದನೇ ರ್ಯಾಂಕ್, ಎಂ.ಟೆಕ್ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಟ್ರಾನ್ಸ್ ಪೋರ್ಟೇಷನ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ರೂಪಾ.ಕೆ.ಆರ್ ಪ್ರಥಮ ರ್ಯಾಂಕ್, ಎಂ.ಬಿ.ಎ ವಿಭಾಗದಲ್ಲಿ ವಿದ್ಯಾ.ಎಂ.ಪಿ ಆರನೇ ರ್ಯಾಂಕ್, ಎಂ.ಸಿ.ಎ ವಿಭಾಗದಲ್ಲಿ ಉಮ್.ಇ.ಅಸ್ಮಾ ಒಂಬತ್ತನೇ ರ್ಯಾಂಕ್ ಪಡೆದಿದ್ದಾರೆ.
ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post