ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸುಮಾರು 45 ಕೋಟಿ ರೂ. ವೆಚ್ಚದ 2 ಲಕ್ಷ ಲೀಟರ್ ಪ್ಯಾಕಿಂಗ್ ಹಾಲಿನ ಘಟಕದ ಉದ್ಘಾಟನೆಯನ್ನು ಫೆ.27ರಂದು ಪ್ರಧಾನ ಮಂತ್ರಿಗಳು ಉದ್ಘಾಟಿಸುವರು. ಹಾಲು ಒಕ್ಕೂಟಕ್ಕೆ ಇದೊಂದು ಐತಿಹಾಸಿಕ ದಿನ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ ರಾವ್ ನಿಸರಾಣಿ ಹೇಳಿದರು.
ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನ ಮಂತ್ರಿಗಳು ಶಿಮುಲ್‌ನ ಘಟಕವನ್ನು ಉದ್ಘಾಟಿಸುತ್ತಿರುವುದು ಇದೇ ಪ್ರಥಮವಾಗಿದೆ. ಇದು ನಮಗೆ ಸಂತೋಷ ತಂದಿದೆ. ಈ ಕಾರ್ಯಕ್ರಮವು ವಿಮಾನ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿಯೇ ಎಲ್ಲಾ ಕಾಮಗಾರಿ ಹಾಗೂ ಶಂಕುಸ್ಥಾಪನೆ ಉದ್ಘಾಟನೆಗಳ ಜೊತೆಗೆ ನಡೆಯುತ್ತದೆ. ಸುಮಾರು 40 ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಲು ಒಕ್ಕೂಟವು ಇದೇ ಸಂದರ್ಭದಲ್ಲಿ ಸುಮಾರು 1 ಲಕ್ಷ ಲೀಟರ್ ಮಜ್ಜಿಗೆ ಪ್ಯಾಕೆಟ್‌ಗಳನ್ನು ವಿತರಿಸಲಿದೆ ಎಂದರು.
ಹಾಲು ಒಕ್ಕೂಟವು ಈಗ ಪಗ್ರತಿಪಥದಲ್ಲಿದ್ದು, ಮುಂದಿನ ದಿನಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಪ್ರಾಡಕ್ಟ್ ಬ್ಲಾಕ್ ನಿರ್ಮಾಣ ಮಾಡುವುದರ ಜೊತೆಗೆ ದಾವಣಗೆರೆಯಲ್ಲಿ ಸುಮಾರು 200 ಕೋಟಿ ರೂ. ವೆಚ್ಚದಲ್ಲಿ 3 ಲಕ್ಷ ಲೀಟರ್ ಸಾಮರ್ಥ್ಯದ ಹಾಲಿನ ಘಟಕ ನಿರ್ಮಾಣ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಹೆಚ್.ಕೆ. ಬಸಪ್ಪ, ಮಾಜಿ ಅಧ್ಯಕ್ಷ ಜಗದೀಶ್ ಬಣಕಾರ್, ಪದಾಧಿಕಾರಿಗಳಾದ ದಿನೇಶ್ ಬುಳ್ಳಾಪುರ, ಸೋಮಶೇಖರಪ್ಪ, ಬಿ.ಜಿ. ಬಸವರಾಜಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post