ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕ ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೊಲೆ, ದರೋಡೆ ಸೇರಿದಂತೆ ಹಲವು ಅಪರಾದ ಕೃತ್ಯಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಜೈಲಿನಲ್ಲಿಡುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಆದೇಶಿಸಿದ್ದಾರೆ.
ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿಗಳಾದ ಶಮಂತ ನಾಯ್ಕ (30) ಮತ್ತು ಸಂದೀಪ್ (27) ಬಂಧಿತ ಆರೋಪಿಗಳಾಗಿದ್ದು, ಇವರು ಕೊಲೆ, ಕೊಲೆಗೆ ಯತ್ನ, ದರೋಡೆ, ಹಲ್ಲೆ, ದೊಂಬಿ, ಕೋಮು ಗಲಭೆ ಮತ್ತು ಗಾಂಜಾ ಮಾರಾಟದಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಸಾರ್ವಜನಿಕರಿಗೆ ಬೆದರಿಕೆ ಹಾಕಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ದಕ್ಕೆಯನ್ನುಂಟು ಮಾಡುತ್ತಿರುವ ಇವರನ್ನು ಮಾರ್ಚ್ 3ರಿಂದ 1 ವರ್ಷದ ಅವಧಿಯವರೆಗೆ ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಆದೇಶಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















