ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಾರ್ಚ್ 5ರ ನಾಳೆ ಭಾನುವಾರ ನಗರದ ನ್ಯೂಟೌನ್ ಪೊಲೀಸ್ ಠಾಣಾ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ನಾಳೆ ಮುಂಜಾನೆ 9 ಗಂಟೆಯಿಂದ ಆಶಾ ಜ್ಯೋತಿ ರಕ್ತ ನಿಧಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಪೊಲೀಸ್ ಸಿಬ್ಬಂದಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ರಕ್ತದಾನ ಯಾಕೆ ಮಾಡಬೇಕು, ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳು ಸೇರಿದಂತೆ ವಿವಿಧ ಮಾಹಿತಿಯನ್ನು ನೀಡಲಿದ್ದಾರೆ.
Also read: ಮಾ.4ರಿಂದ 8ರವರೆಗೆ ದುರ್ಗಿಗುಡಿ ದುರ್ಗಮ್ಮದೇವಿ ಜಾತ್ರೆ
ಈ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರೂ ಸಹ ಪಾಲ್ಗೊಳ್ಳಲು ಅವಕಾಶವಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post