No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾತೃಭಾಷೆಯಿಂದ ಪರಿಣಾಮಕಾರಿ ಕಲಿಕೆ ಸಾಧ್ಯ

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ‌ಸರಣಿಯಲ್ಲಿ ವಿಟಿಯು ಉಪಕುಲಪತಿ ವಿದ್ಯಾಶಂಕರ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2023
in ಶಿವಮೊಗ್ಗ
0
ಮಾತೃಭಾಷೆಯಿಂದ ಪರಿಣಾಮಕಾರಿ ಕಲಿಕೆ ಸಾಧ್ಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |
ಇಂಗ್ಲೀಷ್ ಮೂಲಕ ತಾಂತ್ರಿಕ ಶಿಕ್ಷಣ ಸಾಧ್ಯ ಎಂಬ ತಪ್ಪು ಕಲ್ಪನೆ ಹೋಗಲಾಡಿಸಿ, ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ವಿಟಿಯು ಹೆಚ್ಚು ಒತ್ತು ನೀಡುತ್ತಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪಕುಲಪತಿಗಳಾದ ಪ್ರೊ.ಎಸ್.ವಿದ್ಯಾಶಂಕರ್ ಹೇಳಿದರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಉಪನ್ಯಾಸ ಸರಣೆಯ ಹತ್ತನೇ ಆವೃತ್ತಿಯಲ್ಲಿ ‘ತಾಂತ್ರಿಕ ವಿದ್ಯಾಭ್ಯಾಸದ : ಕವಲುದಾರಿಯಲ್ಲಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಂಡ ನಂತರ ವಿಶ್ವವಿದ್ಯಾಲಯದಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದೇವೆ. ಪ್ರಾದೇಶಿಕ ಭಾಷೆಗಳಿಂದ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ಎನ್ಇಪಿ ಪ್ರತಿಪಾದಿಸಲಿದ್ದು, ಅಂತಹ ಪ್ರಾದೇಶಿಕ ಭಾಷಾ ಕಲಿಕಾ ವೇದಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ.
ವಿದ್ಯಾರ್ಥಿಗಳು ಸಂಸ್ಥೆಯ ಮುಖವಾಣಿ. ನಿರಂತರ ಕಲಿಕೆ ನಿಮ್ಮದಾಗಬೇಕು. ವಿದ್ಯಾರ್ಥಿಗಳನ್ನು ಬಲವಂತವಾಗಿ ಕಾರ್ಯಕ್ರಮಗಳಿಗೆ ಕೂರಿಸುವ ಅನಿವಾರ್ಯತೆಯಿದೆ‌. ಅಂತಹ ಸಂಕುಚಿತತೆಯಿಂದ ಹೊರಬನ್ನಿ. ಹೊಸತನವನ್ನು ಕಲಿಯುವ ಯಾವುದೇ ಅವಕಾಶಗಳನ್ನು ಬಳಸಿಕೊಳ್ಳಿ. ಆಧುನಿಕ ಕಾಲಘಟ್ಟದಲ್ಲಿ ಅನೇಕ ಅಧ್ಯಯನ ಸಂಪನ್ಮೂಲಗಳ ಅವಕಾಶ ಹೆಚ್ಚಿದೆ. ಗೂಗಲ್ ಸರ್ಚ್, ಎನ್.ಪಿ.ಟಿ.ಎಲ್ ನಂತಹ ವೇದಿಕೆಗಳು ಇಡೀ ಶಿಕ್ಷಣ ನೀತಿಯನ್ನು ಬದಲಾಯಿಸುತ್ತಿದೆ.
ಉದ್ಯೋಗ ನೀಡುವ ಸಂಸ್ಥೆಗಳು ಹಾಗೂ ವಿಟಿಯು ನಡುವೆ ಅನೇಕ ಒಡಂಬಡಿಕೆಗಳು ಆಗುತ್ತಿದೆ. ಪ್ರತಿ ವರ್ಷ ಪಠ್ಯಕ್ರಮಗಳು ಬದಲಾಗಲಿದೆ. ಇದರಿಂದ ಕೌಶಲ್ಯತೆಯ ಜೊತೆಗೆ ಇಂಡಸ್ಟ್ರಿಗಳ ಅವಶ್ಯಕತೆಗೆ ಅನುಗುಣವಾಗಿ ಕಲಿಕೆ ಮುಂದುವರಿಯಲಿದೆ. ಅದಕ್ಕಾಗಿಯೇ ಡಿಸೈನ್ ಥಿಂಕಿಂಗ್ ನಂತಹ ವಿಷಯಗಳನ್ನು ಪರಿಚಯಿಸಲಾಗಿದೆ.
ಅಮೃತಮಹೋತ್ಸವದ ಸಂಭ್ರಮದಲ್ಲಿರುವ ಎನ್ಇಎಸ್ ಸಂಸ್ಥೆ ಇಷ್ಟು ದೊಡ್ಡದಾಗಿ‌ ಬೆಳೆಯಲು ಕಾರಣರಾದ ನಿಸ್ವಾರ್ಥ ಸ್ವಾತಂತ್ರ್ಯ ಹೋರಾಟಗಾರರು ಸದಾ ಸ್ಮರಣೀಯ. ಅಂತಹ ವ್ಯಕ್ತಿತ್ವಗಳು ಯುವ ಸಮೂಹಕ್ಕೆ ಮಾದರಿ.
ಕಂಠಪಾಠದ ಪರೀಕ್ಷೆ ಇನ್ನಿಲ್ಲ
ಪರೀಕ್ಷೆಗಳ ಆಯೋಜನೆಯ ಸ್ವರೂಪವನ್ನು ವಿಶ್ವವಿದ್ಯಾಲಯ ಬದಲಾಯಿಸಲಿದೆ. ಫಾರ್ಮುಲಾ ಸಿಸ್ಟಮ್ ಪರಿಚಯಿಸುವ ಮೂಲಕ ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಬೇಕಾದ‌ ಫಾರ್ಮುಲಾ ಸಿಸ್ಟಮ್ ಪ್ರತಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಇದರಿಂದ ಕಂಠಪಾಠದ ಓದು, ಪರೀಕ್ಷಾ ನಕಲು ಮಾಡುವ ಪ್ರಯತ್ನಗಳು ವಿದ್ಯಾರ್ಥಿಗಳಿಂದ ದೂರಾಗಲಿದೆ.
ಎಂಬಿಎ ಎಂಸಿಎ ವಿಭಾಗಕ್ಕೆ ಭಾರಿ ಬೇಡಿಕೆ
ಸ್ನಾತ್ತಕೋತ್ತರ ಪದವಿಗೆ ಬೇಡಿಕೆಗಳು ಹೆಚ್ಚಾಗುತ್ತಿದೆ. ಎಂಬಿಎ ಎಂಸಿಎ ಕೋರ್ಸುಗಳು ವಿದ್ಯಾರ್ಥಿಗಳನ್ನು ಹೆಚ್ಚು ಸೆಳೆಯುತ್ತಿದೆ. ಸ್ನಾತ್ತಕೋತ್ತರ ಪದವಿ, ಸಂಶೋಧನೆಗಳ ಬಗೆಗೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
Also read: ಮಾರ್ಚ್ 5ರಂದು ಭದ್ರಾವತಿ ನ್ಯೂಟೌನ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ: ನೀವೂ ಪಾಲ್ಗೊಳ್ಳಿ
ಬಿ.ಇ ಸೆಮಿಕಂಡಕ್ಟರ್ ಕೋರ್ಸ್ ಪ್ರಾರಂಭ
ಆಧುನಿಕ ತಾಂತ್ರಿಕ ಬದಲಾವಣೆಯಲ್ಲಿ ಸೆಮಿಕಂಡಕ್ಟರ್ ಪ್ರಮುಖ ಪಾತ್ರ ವಹಿಸಲಿದ್ದು, ಇದನ್ನು ಅರಿತು ವಿಶ್ವವಿದ್ಯಾಲಯ ಮುಂದಿನ ದಿನಗಳಲ್ಲಿ ಬಿ.ಇ ಸೆಮಿಕಂಡಕ್ಟರ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ವಾಟ್ಸ್ ಆ್ಯಪ್ ನಲ್ಲಿ ಪರೀಕ್ಷಾ ಫಲಿತಾಂಶ
ಇನ್ನು ಮುಂದೆ ಪರೀಕ್ಷೆ ನಡೆದ ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳ ವಾಟ್ಸ್ ಆ್ಯಪ್ ಸಂಖ್ಯೆಗೆ ನೇರವಾಗಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿ, ತಾಂತ್ರಿಕ ಶಿಕ್ಷಣದಲ್ಲಿ ಅನೇಕ ಕವಲುದಾರಿಗಳಿವೆ. ಪದವಿ ಮುಗಿಸಿದ ವಿದ್ಯಾರ್ಥಿಗಳಲ್ಲಿ, ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗೆ ತಕ್ಕಂತಹ ಕೌಶಲ್ಯತೆಯನ್ನು ಹೊಂದದೇ ಇರುವ ದೊಡ್ಡ ಕೊರತೆಯಿದೆ. ಜೊತೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಲಿಕೆಯಲ್ಲಿ ಎದುರಾಗುತ್ತಿರುವ ಕೊರತೆಗಳನ್ನು ಹೊಗಲಾಡಿಸಿ, ಸವಾಲಿನ ಕವಲುದಾರಿಯಲ್ಲಿ ಯಶಸ್ವಿಯಾಗುವ ಸಾಗುವ ಅವಶ್ಯಕತೆಗಳ ಕುರಿತು ಹೆಚ್ಚು ಚರ್ಚೆಗಳು ನಡೆಯಬೇಕಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ‌‌.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರ ಪ್ರಸಾದ್, ಶೈಕ್ಷಣಿಕ ಡೀನ್ ಡಾ‌.ಪಿ.ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿಟಿಯು ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮಾರ್ಚ್ 5ರಂದು ಭದ್ರಾವತಿ ನ್ಯೂಟೌನ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ: ನೀವೂ ಪಾಲ್ಗೊಳ್ಳಿ

Next Post

ಯುವಕರು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿ: ಡಿಸಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವಕರು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿ: ಡಿಸಿ ಸೂಚನೆ

ಯುವಕರು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿ: ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

April 27, 2026
ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

April 27, 2026
ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

April 27, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 27, 2026
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

April 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL