ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಎಸ್.ಟಿ. ಸಮಾವೇಶವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಹಾಗೂ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಉದ್ಘಾಟಿಸಿದರು.
ಸಮಾವೇಶದ ಅಧ್ಯಕ್ಷತೆಯನ್ನು ಎಸ್.ಟಿ. ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ಅರಸಮಜಲ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಪ್ರಮುಖರಾದ ಗೋಪಾಲಕೃಷ್ಣ ಹೇರಳೆ, ರಾಜೇಶ್ ಕಾವೇರಿ, ಕೊರಗಪ್ಪ ನಾಯ್ಕ್, ರಾಧಾಕೃಷ್ಣ ಬುಡಿಯಾರ್, ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಯಶ್ರೀ ಕರ್ಕೇರ, ರಾಧಕೃಷ್ಣ ಆಳ್ವ, ಜಗನ್ನಿವಾಸ್ ರಾವ್. ಜಿಲ್ಲಾ ಎಸ್.ಟಿ. ಮೋರ್ಚಾ ಮಾಧ್ಯಮ ಪ್ರಮುಖರಾದ ಜಯರಾಮ ನಾಯ್ಕ್ ಕುಂಟ್ರಕಲ, ಜಿಲ್ಲೆಯ ಎಲ್ಲಾ ಮಂಡಗಲ ಅಧ್ಯಕ್ಷ, ಕಾರ್ಯದರ್ಶಿಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಎನ್. ಎಸ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾವೇಶದಲ್ಲಿ ಎಸ್.ಟಿ. ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಲೋಕೇಶ್ ಎನ್. ಕಾರ್ಯಕ್ರಮ ನಿರ್ವಹಿಸಿದರು. ಪುತ್ತೂರು ನಗರ ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಅಶೋಕ್ ನಾಯ್ಕ್ ಬಲ್ನಾಡ್ ವಂದಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















