ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.
ಬುಳ್ಳಾಪುರ ಗ್ರಾಮದ ನಿವಾಸಿ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದ್ದು,ಇವರ ಪುತ್ರ ಬಸವರಾಜ್ (35) ಗಂಭಿರವಾಗಿ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಸರ್ಜಿ ಫೌಂಡೇಷನ್ ಮಹತ್ವದ ಹೆಜ್ಜೆ: ಪಲ್ಲಾಗಟ್ಟೆಯಲ್ಲಿ ಆರೋಗ್ಯ ಕೇಂದ್ರಕ್ಕೆ ಒಡಂಬಡಿಕೆ
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಬಸ್ ಚಾಲಕನ ವಿರುದ್ದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















