ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಬರೆಯುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಭ ಕೋರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೀವನದಲ್ಲಿ ಪಿಯುಸಿ ಪರೀಕ್ಷೆ ಒಂದು ದೊಡ್ಡ ಮೈಲಿಗಲ್ಲು. ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಸಲಹೆ ನೀಡಿದ್ದಾರೆ.

ದ್ವಿತೀಯ ಪಿಯುಸಿ ಬದುಕು ಯಾವ ದಿಕ್ಕಿಗೆ ಹೋಗಬೇಕು ಎಂದು ನಿರ್ಧಾರ ಮಾಡುವ ಮಹತ್ವದ ಪರೀಕ್ಷೆ. ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಪರೀಕ್ಷೆ ಬರೆಯಿರಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಗೃಹ ಸಚಿವರು ಶುಭ ಹಾರೈಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















