ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಳವಾಗುತ್ತಿದ್ದು ತಾಪಮಾನ ಇನ್ನೂ ಕೂಡ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆಲ್ಸಿಯಸ್ ದಾಖಲಾಗಿದೆ.
ಬಿಸಿಲ ಏರಿಕೆಯಿಂದ ಜನರಲ್ಲಿ ವೈರಲ್ ಜ್ವರಗಳು ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ ಕೂಡ ಈಗಾಗಲೇ ಮುಂಜಾಗೃತಾ ಕ್ರಮದ ನಿರ್ದೇಶನವನ್ನು ನೀಡಿದೆ.
ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರಿಕೆಯಾಗಿದೆ. ಕರಾವಳಿ ಭಾಗದಲ್ಲಿ ಮತ್ತೊಮ್ಮೆ ತಾಪಮಾನ ದೇಶದಲ್ಲೇ ದಾಖಲೆಯ ಮಟ್ಟಕ್ಕೆ ತಲುಪಿದೆ. ಮಾರ್ಚ್ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















