ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯುತ್ ಪರಿವರ್ತಕ (ಟ್ರಾನ್ಸ್ ಫಾರ್ಮಾರ್) ಸ್ಫೋಟಗೊಂಡ ಪರಿಣಾಮ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗಿನ ಜಾವ ನಗರದ ಹೊರವಲಯ ಗೋಪಿಶೆಟ್ಟಿಕೊಪ್ಪ ಬಡಾವಣೆಯಲ್ಲಿ ನಡೆದಿದೆ.
ಶ್ರೀಧರಮೂರ್ತಿ ಎಂಬುವರ ಮನೆಯಲ್ಲಿ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಫ್ರಿಡ್ಜ್, ಬಟ್ಟೆ, ದಿನಸಿ ಸಾಮಗ್ರಿಗಳು ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣ, ವಿದ್ಯುತ್ ವೈರಿಂಗ್ ಸುಟ್ಟು ಕರಕಲಾಗಿವೆ.

ಘಟನೆಯಿಂದ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಮನೆಗೆ ಹೊತ್ತಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಬಡಾವಣೆಯ ಹಲವು ಮನೆಗಳಲ್ಲಿ ಟಿವಿ, ಫ್ರೀಡ್ಜ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಳಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















