ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್’ಎಲ್ ಕಾರ್ಖಾನೆ ಉಳಿಸುವ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದಕ್ಕೆ ಈಗ ಸ್ಯಾಂಡಲ್’ವುಡ್ ಹಿರಿಯ ನಟ ದೊಡ್ಡಣ್ಣ ಎಂಟ್ರಿಯಾಗಿದ್ದಾರೆ.
ಕಾರ್ಖಾನೆ ಇಂದಿನ ಸ್ಥಿತಿಗತಿ ಹಾಗೂ ಕಾರ್ಖಾನೆ ಉಳಿವಿನ ವಿಚಾರದಲ್ಲಿ ಗುತ್ತಿಗೆ ಕಾರ್ಮಿಕರ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಕುರಿತು ಕಾರ್ಮಿಕರ ನಿಯೋಗ ಬೆಂಗಳೂರಿನಲ್ಲಿ ಕಾರ್ಖಾನೆಯ ನಿವೃತ್ತ ನೌಕರ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಹಾಗೂ ಕಾರ್ಖಾನೆಯ ನಿವೃತ್ತ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ದೊಡ್ಡಣ್ಣ, ನಮಗೆ ಅನ್ನ, ಬದುಕು ನೀಡಿರುವ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚಬಾರದು. ಮುಂದಿನ ಪೀಳಿಗೆಗೆ ಇದು ಉಳಿಯ ಬೇಕು. ಈ ಹಿನ್ನೆಲೆಯಿಂದ ವಿಐಎಸ್’ಎಲ್ ಉಳಿಸಿ ಜಂಟಿ ಕ್ರಿಯಾ ಸಮಿತಿ ರಚಿಸಿ ಮುಖ್ಯಮಂತ್ರಿ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರನ್ನು ತುರ್ತಾಗಿ ಭೇಟಿಯಾಗಿ ಕಾರ್ಖಾನೆ ಉಳುಸಿಕೊಳ್ಳಲು ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.
Also read: ಕುವೆಂಪು ವಿವಿ ಪ್ರಥಮ ಸೆಮಿಸ್ಟರ್ ಫಲಿತಾಂಶದ ಗೊಂದಲ
ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾಯಂ ಹಾಗು ನಿವೃತ್ತ ಕಾರ್ಮಿಕರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















