ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಕೆಲವು ದಿನಗಳ ಹಿಂದೆ ಬೀದಿ ನಾಯಿಗಳಿಂದ ಕಚ್ಚಿಸಿಕೊಂಡಿದ್ದ ಮಗು ರೇಬಿಸ್‌ಗೆ ತುತ್ತಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಬಿ. ರವೀಂದರ್ ಮತ್ತು ಸಂಧ್ಯಾ ದಂಪತಿಯ ಪುತ್ರ ಬಾನೋತ್ ಭರತ್ (5) ರಘುನಾಥಪಾಲೆಂ ಮಂಡಲದ ಸಣ್ಣ ತಾಂಡಾದಲ್ಲಿ ಮನೆಯ ಬಳಿ ಆಟವಾಡುತ್ತಿದ್ದಾಗ ಬೀದಿನ ನಾಯಿಗಳು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದ್ದವು. ಭಾನುವಾರ ಬಾಲಕ ಅಸ್ವಸ್ಥಗೊಂಡ ಹಿನ್ನೆಲೆ ಖಮ್ಮಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಾಲಕನನ್ನು ತಪಾಸಣೆಗೊಳಪಡಿಸಿದ ವೈದ್ಯರು ರೇಬಿಸ್ ಎಂದು ಶಂಕಿಸಿದ್ದು, ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕರೆದೊಯ್ಯುತ್ತಿದ್ದಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post