ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಹಂದಿ ಅಣ್ಣಿ ಹತ್ಯೆ ಆರೋಪಿಗಳ ಮೇಲೆ ದಾಳಿ ನಡೆಸಿದ್ದ ಗುಂಪು ಹಾವೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಸುನೀಲ ಯಾನೆ ತಮಿಳು ಸುನೀಲ, ಅಭಿಲಾಷ್, ವೆಂಕಟೇಶ್ ಮತ್ತು ಪವನ್ ಎಂಬ ನಾಲ್ವರು ಆಂಜನೇಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಇಂದು ಶರಣಾಗಿದ್ದಾರೆ.
ನಿನ್ನೆ ಚೀಲೂರು ಸಮೀಪದಲ್ಲಿ ಹಂದಿ ಅಣ್ಣಿ ಹತ್ಯೆ ಆರೋಪಿಗಳಾದ ಆಂಜನೇಯ ಮತ್ತು ಮಧು ಎಂಬುವರ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿದ ಪರಿಣಾಮ ಆಂಜನೇಯ ಸ್ಥಳದಲ್ಲಿಯೇ ಸಾವನ್ನಪ್ಪಿ, ಮಧು ಗಂಭೀರ ಸ್ಥತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿ ನಡೆಸಿ ಗುಂಪು ಘಟನಾ ಸ್ಥಳದಿಂದ ಪರಾರಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post