ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕೋಪಯೋಗಿ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ‘ಲೋಕೋಪಯೋಗಿ ಭವನ’ದ ಉದ್ಘಾಟನೆಯನ್ನು ಇಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former Minister B S Yadiyurappa ನೆರವೇರಿಸಿ, ಶುಭ ಕೋರಿದರು.
ಲೋಕೋಪಯೋಗಿ ಕಚೇರಿಗಳು ಒಂದೇ ಸೂರಿನಡಿ ಬರುವಂತೆ ಸಂಕೀರ್ಣ ಕಟ್ಟಡವನ್ನು ಒಟ್ಟು ರೂ. 23.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕಚೇರಿಗಳು ಬೇರೆ ಬೇರೆ ಸ್ಥಳಗಳಲ್ಲಿ ಮತ್ತು ಬಾಡಿಗೆ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಒಂದೇ ಕಟ್ಟಡದ ಅಡಿಯಲ್ಲಿ ಬರುವಂತೆ ಈ ಕಟ್ಟಡ ಸಂಕೀರ್ಣ ನಿರ್ಮಾಣಗೊಂಡಿರುತ್ತದೆ.
ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಬಿ.ಟಿ.ಕಾಂತರಾಜು, ಅಧೀಕ್ಷಕ ಇಂಜಿನಿಯರ್ ಕೆ.ಜಿ.ಜಗದೀಶ್, ಕಾರ್ಯಪಾಲಕ ಇಂಜಿನಿಯರ್‍ಗಳಾದ ಸಂಪತ್ ಕುಮಾರ್ ಪಿಂಗ್ಳೆ, ಕಿರಣ್ ಎಸ್ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post