ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಮೂರು ವಿಧಾನ ಸಭಾ ಕ್ಷೇತ್ರದ ಮೂವರು ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ.
ಸೊರಬ ಕ್ಷೇತ್ರದಿಂದ ಮಧು ಬಂಗಾರಪ್ಪ, Madhu Bangarappa ಭದ್ರಾವತಿಯಿಂದ ಬಿ.ಕೆ. ಸಂಗಮೇಶ್ವರ್ B K Sangameshwar ಹಾಗೂ ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣರಿಗೆ Beluru Gopalakrishna ಮೊದಲ 124 ಜನರ ಪಟ್ಟಿಯಲ್ಲಿ ಹೆಸರು ಘೋಷಿಸಲಾಗಿದೆ.
ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದ ಟಿಕೆಟ್ ನೀಡಲಾಗಿದ್ದು, ಅವರ ಪುತ್ರ ಹಾಲಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ಇನ್ನೂ ಕ್ಷೇತ್ರ ನಿಗದಿಯಾಗಿಲ್ಲ. ಚನ್ನಪಟ್ಟಣ, ಸಿದ್ದರಾಮಯ್ಯನವರು ಸ್ಪರ್ಧಿಸುತ್ತೇನೆ ಎಂದು ಹೇಳುತ್ತಿದ್ದ ಕೋಲಾರ ಮತ್ತು ಅವರು ಹಾಲಿ ಶಾಸಕರಾಗಿರುವ ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ.
Also read: ಮಾ.28ರಂದು ನರಶಸ್ತ್ರರೋಗ ತಜ್ಞ ಡಾ.ತಿಮ್ಮಪ್ಪ ಹೆಗಡೆ ಉಪನ್ಯಾಸ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















