ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ದಾವಣಗೆರೆಯಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯ ಮಹಾಸಂಗಮ ಸಮಾವೇಶದಲ್ಲಿ ಪ್ರಧಾನಿಯವರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ನಂತರ ಸಂಜೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಇಲ್ಲಿಂದ ವಾಯು ಸೇನೆಯ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಐಎಸ್’ಎಫ್ ಹಾಗೂ ಪೊಲೀಸ್ ಭದ್ರತೆಯನ್ನು ನಿಲ್ದಾಣಕ್ಕೆ ಒದಗಿಸಲಾಗಿದೆ.
Also read: ಪಕ್ಷಿಸಂಕುಲದ ಸಾಹಿತ್ಯಕ್ಕೆ ಅಮೂಲ್ಯ ಪುಸ್ತಕ: ಬರ್ಡ್ಸ್ ಆಫ್ ಓಲ್ಡ್ ಮ್ಯಾಗಜೀನ್ ಹೌಸ್ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ಅವರು ವಾಯು ಸೇನೆ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಂದ ದಾವಣಗೆರೆಗೆ ತೆರಳಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















