ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಒಂದೇ ತಿಂಗಳ ಅವಧಿಯಲ್ಲಿ ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಘಟನೆ ವರದಿಯಾಗಿದೆ.
ಕಳೆದ ಕೆಲವು ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಹೋಗಿತ್ತು. ಇದು ನಡೆದ ಕೆಲವೇ ದಿನಗಳ ಅಂತರದಲ್ಲಿ, ಅದೇ ಸ್ಥಳದಿಂದ ಮತ್ತೊಂದು ಬೆದರಿಕೆ ಕರೆ ಹೋಗಿದೆ.
ಮೂಲಗಳ ಪ್ರಕಾರ, ಕರೆ ಮಾಡಿದವರು ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಕೋಟ್ಯಂತರ ಹಣಕ್ಕೆ ಬೇಡಿಕೆಯಿಟ್ಟಿದ್ದು, ಗಡ್ಕರಿ ಅವರ ಕಚೇರಿಯಲ್ಲಿ ಕರೆ ಸ್ವೀಕರಿಸುವವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.
Also read: ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?
ಎರಡನೆಯ ಬಾರಿಗೆ ಸಚಿವರ ಕಚೇರಿಗೆ ದೂರವಾಣಿ ಕರೆ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳ ತಂಡ ಹಿಂಡಲಗಾ ಕಾರಾಗೃಹದಲ್ಲಿ ತಪಾಸಣೆ ನಡೆಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post