ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜನಸಂಕಲ್ಪ ಮಹಾಸಂಗಮ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು.
ಪ್ರಧಾನಿ ನರೇಂದ್ರ ಮೋದಿ, ಅವರ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಮೂರು ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಶಾಸಕರಾದ ಹಲತಾಳು ಹಾಲಪ್ಪ, ಎಂಎಲ್’ಸಿಗಳಾದ ಡಿ.ಎಸ್. ಅರುಣ್, ಆಯನೂರು ಮಂಜುನಾಥ್ ಸೇರಿದಂತೆ ಹಲವು ಪ್ರಮುಖರು ಪ್ರಧಾನಿಯವರನ್ನು ಸ್ವಾಗತಿಸಿದರು.
ಇದಾದ ನಂತರ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದಲ್ಲಿ 5.40ಕ್ಕೆ ಪ್ರಧಾನಿ ಮೋದಿಯವರು ನವದೆಹಲಿಯತ್ತ ಪ್ರಯಾಣ ಬೆಳೆಸಿದರು.
Also read: ಕಾಂಗ್ರೆಸ್ ಮೊದಲ ಪಟ್ಟಿ: ಡಿ.ಕೆ. ರವಿ ಪತ್ನಿ ಸೇರಿ ಆರು ಮಹಿಳೆಯರಿಗೆ ಟಿಕೇಟ್
ಉದ್ಘಾಟನೆಯಾದ ಒಂದು ತಿಂಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಆಗಮಿಸಿದ್ದು ವಿಶೇಷವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post