ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಶಿಕಾರಿಪುರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿಲ್ಲ. ಆದರೆ, ಕೆಲವು ಚಾನಲ್ ಹಾಗೂ ಮಾಧ್ಯಮಗಳಲ್ಲಿ ಈ ರೀತಿಯ ಸುದ್ಧಿ ಬಿತ್ತರಗೊಳ್ಳುತ್ತಿದೆ ಎಂದಿದ್ದಾರೆ.
ಒಳಮೀಸಲಾತಿ ಬದಲಾವಣೆ ವಿರೋಧಿಸಿ ಇಂದು ಮುಂಜಾನೆಯಿAದ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ, ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ್ದರು.
ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















