ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಿರುವುದನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ ತಿವ್ರವಾಗಿ ಖಂಡಿಸಿದ್ದಾರೆ.
ಅವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಮೀಸಲಾತಿ ಮತ್ತು ಒಳಮೀಸಲಾತಿಗೆ ಸಂಬಂಧಿಸಿದಂತೆ ಉತ್ತಮ ಕೆಲಸ ಮಾಢುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಬಂಜಾರ ಸಮಾಜಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಮತ್ತು ಒಳಮಿಸಲಾತಿಯಲ್ಲಿ ಕೂಡ ಹೆಚ್ಚುವರಿ ನೀಡಿದ್ದಾರೆ. ಆದರೆ ತಪ್ಪು ತಿಳುವಳಿಕೆಯಿಂದ ಈ ಪ್ರತಿಭಟನೆ ಮಾಡಲಾಗುತ್ತಿದೆ ಇದರ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವೇ ಇದೆ. ಇದೊಂದು ಅಕ್ಷಮ್ಯ ಅಪರಾಧ ಎಂದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಗೋ ರಕ್ಷಣೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಮುಖವಾಗಿ ಪುಣ್ಯಕೋಟಿ ದತ್ತಯೋಜನೆ ಯಶಸ್ವಿಯತ್ತ ಸಾಗಿದೆ. ಆ ಮೂಲಕ ಗೋವುಗಳ ಸಂರಕ್ಷಣೆಯಾಗುತ್ತಿದೆ. ಒಂದು ಗೋವಿಗೆ ವರ್ಷಕ್ಕೆ 11 ಸಾವಿರ ರೂ. ನೀಡಲಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಗೋಶಾಲೆಗಳಿವೆ. ಅದರಲ್ಲಿ ಶಿವಮೊಗ್ಗದಲ್ಲಿಯೇ ನಾಲ್ಕು ಗೋಶಾಲೆಗಳಿವೆ. ಸರ್ಕಾರದಿಂದ ಇದುವರೆಗೂ 1.71 ಕೋಟಿ ರೂ. ನೆರವು ಸಿಕ್ಕಿದೆ ಎಂದರು.
Also read: ಈ ರೈಲು ಸೇವೆ ಮತ್ತೆ ಆರಂಭ: ಯಾವ ಮಾರ್ಗ, ಎಂದಿನಿಂದ ಸಂಚರಿಸಲಿದೆ? ಇಲ್ಲಿದೆ ಮಾಹಿತಿ
ಗೋ ಸಂರಕ್ಷಣೆಗಾಗಿ ಸರ್ಕಾರ ಸತತವಾಗಿ ಶ್ರಮಿಸುತ್ತಿದೆ. ಗೋ ಹತ್ಯೆ ನಿಷೇದ ಕಾಯಿದೆ ಮತ್ತಷ್ಟು ಬಿಗಿಯಾಗಬೇಕು. ಅದರ ಸಂರಕ್ಷಣೆಗಾಗಿ ವಿಶೇಷ ತಂಡ ರಚಿಸಬೇಕು. ಗೋಪ್ರಿಯರು ಗೋವುಗಳ ದತ್ತು ತೆಗೆದುಕೊಳ್ಳುವ ಮೂಲಕ ಗೋ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು. ರೈತರು ಕೂಡ ತಮ್ಮ ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡಬಾರದು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ಮೋಹನ್ ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ್, ಬಾಲು, ಮಂಜುನಾಥ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post