ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಕೊಂಡಿಂಬಾಳ ಗುಂಡಿಮಜಲ್ ಅದ್ವೈತ್ ಶೆಟ್ಟಿ(15) 10ನೆಯ ತರಗತಿ ವಿದ್ಯಾರ್ಥಿ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಇಲ್ಲಿನ ನಿವಾಸಿ ಮಂಜುನಾಥ್ ಶೆಟ್ಟಿ ಎನ್ನುವವರ ಮಗ, ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅದ್ವೈತ್’ನನ್ನು ರಾತ್ರಿಯಿಡೀ ಮನೆಯವರು ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ.
ಆದರೆ, ಇಂದು ಬೆಳಗ್ಗೆ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಬ್ಯಾಗ್ ಪತ್ತೆಯಾಗಿತ್ತು. ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
Also read: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ನಲಪಾಡ್ ವಿರುದ್ಧ ಚಿಕ್ಕಮಗಳೂರಿನಲ್ಲಿ ದೂರು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















