ಕಲ್ಪ ಮೀಡಿಯಾ ಹೌಸ್ | ಇಂದೋರ್ |
ದೇವಾಲಯದ ಮೆಟ್ಟಿಲು ಬಾವಿ ಕುಸಿದುಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್’ನಲ್ಲಿ ನಡೆದಿದೆ.
ಇಂದೋರ್’ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಾಲಯದಲ್ಲಿರುವ ಪುರಾತನ ದೊಡ್ಡ ಬಾವಿ(ಬಾವಡಿ) ಇಂದು ಕುಸಿದಿದೆ. ರಾಮನವಮಿ ಹಿನ್ನೆಲೆಯಲ್ಲಿ ಇಂದು ಜನ ದಟ್ಟಣೆ ಹೆಚ್ಚಾಗಿತ್ತು. ಈ ವೇಳೆ ಮೆಟ್ಟಿಲು ಬಾವಿ ಕುಸಿದಿದ್ದು, ಸುಮಾರು 25 ಮಂದಿ ಒಳಕ್ಕೆ ಬಿದ್ದಿದ್ದಾರೆ. 12 ಮಂದಿ ಸಾವನ್ನಪ್ಪಿದ್ದು, 19 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿದ್ದು, ಭಕ್ತರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಡೆಸಿದ್ದಾರೆ.
Also read: ತರಾತುರಿಯ ಎನ್‌ಇಪಿ ಅನುಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ತೊಂದರೆ: ಪ್ರೊ. ಪೂರ್ಣಾನಂದ ಆತಂಕ
ಘಟನೆ ಕುರಿತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿದ್ದು, ಮಾಹಿತಿ ಪಡೆದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















