ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ, ಕೋಲ ಹಾಗೂ ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆಗೆ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಿರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳ ಕುರಿತಾದ ಬ್ಯಾನರ್, ಬಂಟಿಂಗ್ಸ್ ಹಾಕುವ ಮುನ್ನ ಸ್ಥಳೀಯ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕಾಗುತ್ತದೆ ಎಂದರು.

ಇಂತಹ ಯಾವುದೇ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡುಬAದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.












Discussion about this post