ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಕೊಂಡಿದ್ದು, ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳ ವಶಕ್ಕೆ ಪಡೆದು ಸಂಬಂಧಪಟ್ಟವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ವಿವಿಧಡೆ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಸಮರ್ಪಕ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ನಗದು ಸೀರೆ ಇನ್ನಿತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು ಮೌಲ್ಯ 4.50 ಲಕ್ಷ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆದು ತಪಾಸಣೆ ಕೈಗೊಳ್ಳಲಾಗಿದೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಇರುವ ನಗದು ವಶಕ್ಕೆ ತೆಗೆದುಕೊಂಡಿದ್ದಾರೆ. ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 1.40 ಲಕ್ಷ ರೂ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದ ನಗದು ವಶಕ್ಕೆ ಪಡೆದಿದ್ದಾರೆ ವಾಹನದಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ನಗದು ಹಣ ವಶ ಪಡಿಸಿಕೊಳ್ಳಲಾಗಿದೆ.
ಹಾಗೆಯೇ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದ ಅಕ್ಕಿ ವಶ ಪಡಿಸಿಕೊಳ್ಳಲಾಗಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ, ಅಂದಾಜು 1,56,000 ರೂ. ಮೌಲ್ಯದ 26 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















