ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣಾ ನೀತಿ ಸಂಹಿತೆ ಅನುಸಾರ ನಟ ಸುದೀಪ್ ಇವರ ಚಲನಚಿತ್ರ, ಟಿವಿ ಶೋ ಮತ್ತು ಅವರು ಇರುವ ಜಾಹೀರಾತು ಪ್ರಸಾರವನ್ನು ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ವಕೀಲ ಕೆ.ಪಿ. ಶ್ರೀಪಾಲ ಚುನಾವಣಾ ಆಯೋಗದ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ನಟ ಸುದೀಪ್ ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿವಿಗಳಲ್ಲಿ ಪ್ರದರ್ಶನವಾಗದಂತೆ, ಹಾಗೂ ಅವರು ನಡೆಸಿಕೊಡುವ ಟಿವಿ ಶೋಗಳು, ಜಾಹೀರಾತುಗಳು ಸಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸುದೀಪ್ ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ. ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
Also read: ಗಮನಿಸಿ! ಎ.9ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















