No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚುನಾವಣಾ ಅಭ್ಯರ್ಥಿ ಆಯ್ಕೆ ಹಿನ್ನೆಲೆ: ಕಾಂಗ್ರೆಸ್ ನಾಯಕರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ

ಶಾಸಕ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ಧಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2023
in ಶಿವಮೊಗ್ಗ
0
ಗಣಿನಾಡು ಬಳ್ಳಾರಿಯಲ್ಲಿ  ಕಾಂಗ್ರೆಸ್ ಜಯಭೇರಿ: ಬಿಜೆಪಿಗೆ ಮುಖಭಂಗ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಮಾಜಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಪ್ರಚಾರ ಸಮಿತಿ ರಾಜ್ಯ ಸಂಯೋಜಿಕ ಎಸ್.ಪಿ. ದಿನೇಶ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ ಅವರು ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಕೂಡ ಸ್ವಾಗತಿಸುತ್ತೇವೆ ಎಂದರು.
ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮುಖ್ಯ.  ಆಯನೂರು ಮಂಜುನಾಥ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತೇವೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಹೈಕಮಾಂಡ್ ಪಕ್ಷದ ಒಳಿತಿಗಾಗಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಬಿಜೆಪಿಯ ಕೆ.ಎಸ್. ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಮೂಲಕ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿದ್ದಾರೆ. ಸಿದ್ದರಾಮಯ್ಯ ಅವರನ್ನು ಅಲೆಮಾರಿಗಳಿಗೆ ಹೋಲಿಸುವ ಮೂಲಕ  ಅಲೆಮಾರಿ ಸಮುದಾಯವನ್ನು ಅಪಮಾನಿಸಿದ್ದಾರೆ. ಈಶ್ವರಪ್ಪನವರಿಗೆ ಅವರ ಪಕ್ಷದಲ್ಲೇ ಟಿಕೆಟ್ ಸಿಗುವ ಖಾತರಿ ಇಲ್ಲ.  ಅವರ ಪಕ್ಷದಲ್ಲೆ ವಿರೋಧಿಗಳಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಸಿದ್ದರಾಮಯ್ಯ ಅವರನ್ನು ಟೀಕಿಸುವ ಮೂಲಕ  ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರನ್ನು ಬಯ್ಯದೆ ಹೋದರೆ ಈಶ್ವರಪ್ಪನವರಿಗೆ ಏಳಿಗೆಯೇ ಇಲ್ಲ. ಶಾಸಕರಾದವರು, ಉಪಮುಖ್ಯಮಂತ್ರಿಯಾಗಿದ್ದವರು ಎಚ್ಚರದಿಂದ ಮಾತನಾಡಬೇಕು. ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಯಾವ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ ಎಂಬುದನ್ನು ಅವರ ಪಕ್ಷದವರೆ ಹೇಳುತ್ತಿದ್ದಾರೆ. ಈಶ್ವರಪ್ಪ  ತನ್ನ ಅಸ್ತಿತ್ವನ್ನು ತೋರಿಸಿಕೊಳ್ಳಲು ಸಿದ್ದರಾಮಯ್ಯ ವರನ್ನು ಟೀಕಿಸುತ್ತಿದ್ದಾರೆ. ಎಂದು ಮಾಜಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಈಶ್ವರಪ್ಪ ವಿರುದ್ದ ವಾಗ್ದಾಳಿ ನಡೆಸಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಈಶ್ವರಪ್ಪ ಅವರು ಶಿವಮೊಗ್ಗಕ್ಕೆ ಮೂಲತಃ ವಲಸೆ ಬಂದವರೇ ಆಗಿದ್ದಾರೆ. ಇಂತವರಿಗೆ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕ ಹಕ್ಕಿಲ್ಲ. ನಲವತ್ತು ಪರ್ಸೆಂಟ್ ಈಶ್ವರಪ್ಪನವರು  ಮಂತ್ರಿಗಿರಿ ಕಳೆದುಕೊಂಡಿದ್ದು, ಮತ್ತೆ ಕೋರ್ಟು ವಿಚಾರಣೆ ದಿನ ನಿಗದಿ ಮಾಡಿದೆ. ಇದರಿಂದ ಈಗ ಮುನ್ನೆಲೆಗೆ ಬರಲು  ಸಿದ್ದರಾಮಯ್ಯ ಅವರ ವಿಚಾರವನ್ನೆ ಮಾತನಾಡಬೇಕಾಗಿದೆ. ಅದಕ್ಕಾಗಿ ಪದೇ ಪದೇ ಸಿದ್ದರಾಮಯ್ಯವರ ಜಪ ಮಾಡುತ್ತಿದ್ದಾರೆ. ಈಶ್ವರಪ್ಪನವರ ಮಾತು ವಿಚಾರಗಳನ್ನು ಮಾನವೀಯ ಸಮಾಜದಲ್ಲಿ ಯಾರೂ ಒಪ್ಪುವುದಿಲ್ಲ ಎಂದರು.
Kalahamsa Infotech private limited
ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಎಸ್.ಪಿ. ದಿನೇಶ್ ಮಾತನಾಡಿ, ಈ ಹಿಂದೆ ನಗರದಲ್ಲಿ ಶಾಂತಿಗಾಗಿ ನಡಿಗೆ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ಮಕ್ಕಳು ಭಾಗವಹಿಸದಂತೆ ತಡೆದು, ಬಹಿರಂಗ ಸಭೆಗೆ ಸ್ಥಳಾವಕಾಶ ನೀಡದೆ ಮಠಾಧೀಶರು ಬೀದಿಯಲ್ಲಿ ಕುಳಿತು ಆಶೀರ್ವಚನ ಮಾಡುವಂತ ಪರಿಸ್ಥಿತಿಯನ್ನು ಈಶ್ವರಪ್ಪ ಮಾಡಿದ್ದರು. ಈಗ ಇದೇ ಮಠಾಧೀಶರನ್ನು ಭೇಟಿ ಮಾಡುತ್ತಾ ಲಿಂಗಾಯಿತ ಸಮುದಾಯವನ್ನು ಓಲೈಸುವ ಪ್ರಯತ್ನ ಮಾಡುತ್ತಿರುವುದು ಏಕೆ ಎಂದು ಕೆ.ಎಸ್. ಈಶ್ವರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿಗೋಷ್ಟಿಯಲ್ಲಿ ಓಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಶಿವಿಶ್ವನಾಥ್, ಉತ್ತರಬ್ಲಾಕ್ ಅಧ್ಯಕ್ಷ ದೀಪಕ್ ಸಿಂಗ್, ಆಸೀಫ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಹಲವು ಯುವಕರು ಜೆಡಿಎಸ್ ಸೇರ್ಪಡೆ

Next Post

ಗಾಂಜಾ ಮಾರಾಟ ಹಿನ್ನೆಲೆ: ಮೂವರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಗಾಂಜಾ ಮಾರಾಟ ಹಿನ್ನೆಲೆ: ಮೂವರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

June 7, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL