ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣಗೆ ಆರಂಭವಾಗಿರುವ ಬೆನ್ನಲ್ಲೇ ಕಮಲ ಪಾಳಯದ ಟಿಕೇಟ್ ವಿಚಾರ ಇನ್ನೂ ಗುಪ್ತವಾಗಿಯೇ ಇದ್ದು, ನಾಳೆ ಅಥವಾ ನಾಡಿದ್ದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಟಿಕೇಟ್ ಕುರಿತಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ರಾಷ್ಟç ರಾಜಧಾನಿ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವರಿಷ್ಠರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ವರದಿಗಳಂತೆ ಈಗಾಗಲೇ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆ ಮುಕ್ತಾಯವಾಗಿದ್ದು, 224 ಅಭ್ಯರ್ಥಿಗಳ ಪಟ್ಟಿಯನ್ನು ಒಂದೇ ಬಾರಿ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















