ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ನಿಯಂತ್ರಣ ತಪ್ಪಿದ ಬೈಕ್ ಪ್ರಪಾತಕ್ಕೆ ಬಿದ್ದ ಪರಿಣಾಮ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಬಿಸಿ ರೋಡ್ ಸಮೀಪ ನಡೆದಿದೆ.
ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು , ಮೃತನನ್ನು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ಯಶೋಧರ (25) ಎಂದು ಗುರುತಿಸಲಾಗಿದೆ.
ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಹಿಂತಿರುಗುತ್ತಿದ್ದ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ಕೆಎಸ್’ಆರ್’ಟಿಸಿ ಬಸ್ ಡಿಪೋ ದ ಬಳಿ ಬೈಕ್ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.
Also read: ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಚುನಾವಣಾ ಆಯೋಗ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post