ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಹಲವಾರು ವರ್ಷಗಳಿಂದ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡಿರುವ ಅಯೂಬ್ ಖಾನ್‌ರವರು ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿ, ಪ್ರಸ್ತುತ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ಶಾಸಕ ಬಿ.ಕೆ ಸಂಗಮೇಶ್ವರ್ ರಾಜಕೀಯ ಭವಿಷ್ಯ ಮತ್ತಷ್ಟು ಉಜ್ವಲಗೊಳ್ಳುವ ಮೂಲಕ ಕ್ಷೇತ್ರ ಸರ್ವತೋಮುಖವಾಗಿ ಮತ್ತಷ್ಟು ಅಭಿವೃದ್ಧಿಗೊಳ್ಳುವ ವಿಶ್ವಾಸವಿದೆ ಎಂದರು.
ದೇಹದಾರ್ಢ್ಯ ಪಟು ಶೌಕತ್ ಆಲಿ ಸಹ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಮುಖಂಡರಾದ ಬಾಬಳ್ಳಿ ರಾಜಶೇಖರ್, ಅಬ್ದುಲ್ ಖದೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Also read: ಪ್ರಪಾತಕ್ಕೆ ಬಿದ್ದ ಬೈಕ್: ಹಿಂಬದಿ ಸವಾರ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post