ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಮ್ಮ ರಾಜಕೀಯ ನಿವೃತ್ತಿ ಕುರಿತಾಗಿ ರಾಷ್ಟಾçಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ತಾವು ಪತ್ರ ಬರೆದಿರುವುದು ನಿಜ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ತಮ್ಮ ಸ್ವಗೃಹದಲ್ಲಿ ಮಾತನಾಡಿದ ಅವರು, ಪತ್ರ ಬರೆದಿರುವುದು ನಿಜ. ಅದನ್ನು ರಾಷ್ಟಾçಧ್ಯಕ್ಷರು ಅಂಗೀಕರಿಸಬೇಕು. ಅಲ್ಲದೇ, ಚುನಾವಣೆಯ ಜವಾಬ್ದಾರಿ ನೀಡಿದರೆ ಅದನ್ನು ನಿರ್ವಹಿಸಲು ಸಿದ್ದನಿದ್ದೇನೆ ಎಂದಿದ್ದಾರೆ.

ತಮ್ಮ ಉತ್ತರಾಧಿಕಾರಿ ಕುರಿತಾಗಿ ಮಾತನಾಡಿದ ಅವರು, ವರಿಷ್ಠರು ಹಾಗೂ ಚುನಾವಣಾ ಸಮಿತಿ ಏನು ನಿರ್ಧಾರ ಕೈಗೊಳ್ಳುತ್ತದೆ ಅದಕ್ಕೆ ಎಲ್ಲರೂ ಬದ್ದರಾಗಿರುತ್ತೇವೆ ಎಂದಿದ್ದಾರೆ.
ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲ ನಾಯಕರೂ ಒಟ್ಟಾಗಿ ಶ್ರಮಿಸಲಿz್ದÉÃವೆ. ಕಾರ್ಯಕರ್ತರು ಇದಕ್ಕೆ ಪೂರಕವಾಗಿ ಶ್ರಮ ವಹಿಸಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post