ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆ.ಎಸ್. ಈಶ್ವರಪ್ಪ ಹಾಗೂ ತಮ್ಮ ವಿರುದ್ಧ ಯಾವುದೇ ರೀತಿಯ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ ಎಂದು ಎಂಎಲ್’ಸಿ ಆಯನೂರು ಮಂಜುನಾಥ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆ.ಎಸ್. ಈಶ್ವರಪ್ಪ ಅವರ ವಿರುದ್ದ ತಮಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ಆದರೆ ಅವರ ಸ್ಪರ್ಧೆಗೆ ತಮ್ಮ ಆಕ್ಷೇಪವಿತ್ತು. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿರುವುದರಿಂದ, ತಮ್ಮ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಾವು ಈಗಲೂ ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೇನೆ. ಇಷ್ಟರಲ್ಲಿಯೇ ಎಲ್ಲವೂ ಸ್ಪಷ್ಟವಾಗಲಿದೆ ಎಂದಿದ್ದಾರೆ.
Also read: ಭಾರತದ ಒಂದಿಂಚು ಭೂಮಿಯನ್ನು ಕೂಡ ಯಾರು ಆಕ್ರಮಿಸಲು ಸಾಧ್ಯವಿಲ್ಲ: ಅಮಿತ್ ಶಾ ಗುಡುಗು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















