ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ.
ಇಂದು ಬಿಜೆಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಈಶ್ವರಪ್ಪನವರು ತಮ್ಮ ನಿರ್ಧಾರವನ್ನು ಬದಲಾವಣೆ ಮಾಡಬೇಕು. ಅಲ್ಲದೇ, ನಗರ ಕ್ಷೇತ್ರಕ್ಕೆ ಅವರನ್ನೇ ಅಭ್ಯರ್ಥಿ ಎಂದು ಘೋಷಿಸಬೇಕು. ತಪ್ಪಿದಲ್ಲಿ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೇಟ್ ನೀಡಬೇಕು ಎಂದು ಆಗ್ರಹಿಸಿದರು.
ಬೃಹತ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ವಾಹನಗಳನ್ನು ತಡೆದು ಧರಣಿ ನಡೆಸಿದರು. ಟೈರ್’ಗೆ ಬೆಂಕಿ ಹಚ್ಚಲು ಮುಂದಾದ ಕಾರ್ಯಕರ್ತರನ್ನು ನಾಯಕರು ನಡೆದು ಸಮಾಧಾನ ಪಡಿಸಿದರು.
Also read: ಪಕ್ಷ ಇಂದು ಎತ್ತರಕ್ಕೆ ಬೆಳೆದಿದೆ, ಹಾಗಾಗಿ ನಾವೀಗ ಬೇಕಾಗಿಲ್ಲ: ರಘುಪತಿ ಭಟ್ ನೋವಿನ ಮಾತು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post