ಕಲ್ಪ ಮೀಡಿಯಾ ಹೌಸ್ | ಸಾಗರ |
ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಕಟ್ಟಕಡೆಯ ಮನುಷ್ಯನಿಗೂ ಸಹ ತಲುಪಿಸಿದ ಹರತಾಳು ಹಾಲಪ್ಪರನ್ನು ಗೆಲ್ಲಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಮನವಿ ಮಾಡಿದರು.
ಸಾಗರ ಕ್ಷೇತ್ರದಿಂದ ಹಾಲಪ್ಪನವರು ನಾಮಪತ್ರ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಸಹ ತಲುಪಿಸುವಲ್ಲಿ ಹಾಲಪ್ಪನವರು ಬಹಳಷ್ಟು ಶ್ರಮಿಸಿದ್ದಾರೆ. ಇಂತಹ ವ್ಯಕ್ತಿಯನ್ನು ನೀವು ಕೇವಲ ಶಾಸಕರನ್ನಾಗಿ ಆಯ್ಕೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವರನ್ನಾಗಿ ಗೆಲ್ಲಿಸುತ್ತೀರಿ ಎಂದರು.
Also read: ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post